Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಲ್ಲರ ಹಕ್ಕುಗಳ ರಕ್ಷಣೆ, ಮಾನವೀಯತೆ...

ಎಲ್ಲರ ಹಕ್ಕುಗಳ ರಕ್ಷಣೆ, ಮಾನವೀಯತೆ ಸಂವಿಧಾನದ ಆಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Nov 2023 11:08 PM IST
share
ಎಲ್ಲರ ಹಕ್ಕುಗಳ ರಕ್ಷಣೆ, ಮಾನವೀಯತೆ ಸಂವಿಧಾನದ ಆಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನ.26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದುದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಸ್ಮರಿಸಿದರು.

ಉದ್ದೇಶಗಳು ಸಾರ್ಥಕ: ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಅದರ ಉದ್ದೇಶ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ಆಶಯಗಳಂತೆ ನಡೆಯುತ್ತಿದೆ: ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಗಾಂಧಿ, ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ತಿಳಿಸಿದರು.

ಎಲ್ಲ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ. ಸರಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ನಮ್ಮ ದೇಶದ ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಭ್ರೂಣ ಹತ್ಯೆ: ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಭ್ರೂಣಹತ್ಯೆ ಪ್ರಕರಣಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X