Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತುಮಕೂರು ವಿವಿ ಸಮಾರಂಭಕ್ಕೆ ಪತ್ರಕರ್ತ...

ತುಮಕೂರು ವಿವಿ ಸಮಾರಂಭಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಬೇಡ: ಪ್ರಗತಿಪರ ಸಂಘಟನೆಗಳಿಂದ ಕುಲಪತಿ, ಕುಲಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ14 July 2023 11:00 PM IST
share
ತುಮಕೂರು ವಿವಿ ಸಮಾರಂಭಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಬೇಡ: ಪ್ರಗತಿಪರ ಸಂಘಟನೆಗಳಿಂದ ಕುಲಪತಿ, ಕುಲಸಚಿವರಿಗೆ ಮನವಿ

ತುಮಕೂರು.ಜು.14: ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಕರೆಸುತ್ತಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ-ಯುವಜನರ ವೇದಿಕೆ ಹಾಗೂ ವಿವಿ ಹಳೆಯ ವಿದ್ಯಾರ್ಥಿ ವೇದಿಕೆಗಳಿಂದ ವ್ಯಾಪಕ ಖಂಡನೆ ಮತ್ತು ವಿರೋಧ ವ್ಯಕ್ತವಾಗಿದೆ.

ತುಮಕೂರು ವಿಶ್ವವಿದ್ಯಾಲಯ ಜಾತ್ಯತೀತ ಪರಂಪರೆಯನ್ನು ಹೊಂದಿದೆ. ಸಾಮರಸ್ಯತೆಗೆ ಹೆಸರಾಗಿದೆ.ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ.ಇಂತಹ ಮಹತ್ವದ ಪರಂಪರೆಯನ್ನು ಸಾರುತ್ತಿರುವ ವಿಶ್ವವಿದ್ಯಾಲಯ ದಲ್ಲಿ ಮತೀಯ ಭಾವನೆಗಳನ್ನು ಕೆರಳಿಸುವ, ವಿಛಿದ್ರಕಾರಿ ಸಂಗತಿಗಳನ್ನು ಪ್ರತಿಪಾದಿಸುವ ಪತ್ರಕರ್ತ ಅಜಿತ್ ಹನುಮಕ್ಕನವ್ ಅವರನ್ನು ಯಾವುದೇ ಕಾರಣಕ್ಕೂ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆಸುವುದು ಬೇಡ. ಒಂದೊಮ್ಮೆ ಅವರನ್ನು ಕರೆಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿವಿಧ ಸಂಘಟಗಳನ್ನು ಎಚ್ಚರಿಕೆ ನೀಡಿವೆ.

ಇಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೆಂಕಟೇಶ್ವರಲು ಅವರನ್ನು ಭೇಟಿ ಮಾಡಿದ ಪ್ರಗತಿಪರ ವಿದ್ಯಾರ್ಥಿ-ಯುವಜನರ ಸಂಘಟನೆಗಳ ಒಕ್ಕೂಟ, ಹಳೆಯ ವಿದ್ಯಾರ್ಥಿಗಳ ವೇದಿಕೆ ಮತ್ತು ಜಿಲ್ಲಾ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಸಮಾಜದಲ್ಲಿ ದ್ವೇಷ ಹರಡುವ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಕರೆಸುವುದನ್ನು ನಿಲ್ಲಿಸಬೇಕು ಸಂಘಟನೆಗಳು ಒತ್ತಾಯಿಸಿವೆ.

ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ ನಡೆಯುತ್ತಿದೆ.ಇಂತಹ ಹಬ್ಬಕ್ಕೆ ಅಜಿತ್ ಹನುಮಕ್ಕನವರ್ ಅವರಿಂದ ಕೋಮುವಾದಿ ಭಾಷಣ ಮಾಡಿಸಲು ಹೊರಟಿರುವ ವಿವಿಯ ಕ್ರಮ ಪ್ರಶ್ನಾರ್ಹವಾಗಿದೆ.ಅಲ್ಲದೆ ವಿವಿಯ ಪರಂಪರೆಯನ್ನು ನಾಶ ಮಾಡಲು ಹುನ್ನಾರ ನಡೆಸಲಾಗುತ್ತಿದೆ.ಶಾಂತಿ-ಸುವ್ಯವಸ್ಥೆಯನ್ನು ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ವಿವಿಯ ಕ್ರಮವನ್ನು ಖಂಡಿಸಿ ಮತ್ತು ವಿವಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ ಬದಲಾಗಿ ಕೋಮುವಾದಿ ಚಟುವಟಿಕೆಗಳು ಹೆಚ್ಚಳವಾಗಿದ್ದು, ಇದನ್ನು ಖಂಡಿಸಿ ಜುಲೈ 20ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ನಾಡಿನ ಹೆಸರಾಂತ ಸಾಹಿತಿಗಳು,ಪ್ರಗತಿ ಪರ ಹೋರಾಟಗಾರರು, ಕಲಾವಿದರು, ವಿದ್ಯಾರ್ಥಿ ಸಂಘಟನೆಗಳು, ದಲಿತ ಸಂಘಟನೆಗಳು, ವಿವಿಯ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಇಂದು ಕುಲಪತಿಗಳು ಮತ್ತು ಕುಲಸಚಿವರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ ಅಜಿತ್ ಹನುಮಕ್ಕನವರ್ ಅವರ ಆಹ್ವಾನಿಸಿರುವುದನ್ನು ಕೈಬಿಡುವಂತೆ ಮಾತುಕತೆ ನಡೆಸಲಾಯಿತು ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ದ ಶಿಸ್ಸುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಸಿಂಡಿಕೇಟ್ ಮಾಜಿ ಸದಸ್ಯ ಕೊಟ್ಟಶಂಕರ್, ಪ್ರಗತಿಪರ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಗೋಪಿನಾಥ್,ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಅರುಣ್, ವಕೀಲ ರಂಗಧಾಮಯ್ಯ, ಉಪನ್ಯಾಸಕ ಮೂರ್ತಿ, ವಕೀಲ ಹಾಗೂ ಎಸ್.ಎಫ್.ಐ ಜಿಲ್ಲಾಧ್ಯಕ್ಷ ಈ ಶಿವಣ್ಣ,ಹಳೆಯ ವಿದ್ಯಾರ್ಥಿ ಒಕ್ಕೂಟದ ಮುಖಂಡ ಎಚ್.ವಿ.ರಮೇಶ್, ಬಂಡೆಕುಮಾರ,ಮೂರ್ತಿ ಕೆಸ್ತೂರು,ವಾಸುದೇವ್ ಎನ್ ನಾದೂರ್, ಛಲವಾದಿ ಮಹಾಸಭಾದ ಶೇಖರ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಜೊತೆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X