Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿರೋಧ ಪಕ್ಷಗಳ ಸದಸ್ಯರ ಅಮಾನತು ಖಂಡಿಸಿ...

ವಿರೋಧ ಪಕ್ಷಗಳ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Dec 2023 2:20 PM IST
share
ವಿರೋಧ ಪಕ್ಷಗಳ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ

ಬೆಂಗಳೂರು: ‘ಸಂಸತ್ತಿನ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕೇಂದ್ರ ಸರಕಾರ ಉತ್ತರ ನೀಡಬೇಕೆಂದು ಆಗ್ರಹಿಸಿದ ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ‘ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಕೇಂದ್ರ ಸರಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ದೂರಿದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೆ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು’ ಎಂದು ಅವರು ಸ್ಮರಿಸಿದರು.

‘ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿಪಕ್ಷ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು’ ಎಂದು ಶಿವಕುಮಾರ್ ಟೀಕಿಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಶೇ.98ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59ಸಾವಿರ ಕೋಟಿ ರೂ.ಗಳಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ’ ಎಂದು ಅವರು ನುಡಿದರು.

‘ಕೇಂದ್ರದ ಬಿಜೆಪಿ ಸರಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ವಿಪಕ್ಷಗಳ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡಿಸಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಮಾನ. ಈ ವಿಚಾರವಾಗಿ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಕೇಂದ್ರದ ಜನವಿರೋಧಿ ಧೋರಣೆ, ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X