Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ...

ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದಿಂದ ಪ್ರತಿಭಟನಾ ರ‍್ಯಾಲಿ; ಬಂದ್‌ ಗೆ ಬೆಂಬಲಿಸದೆ ರಸ್ತೆಗಿಳಿದ ವಾಹನಗಳ ಮೇಲೆ ಕಲ್ಲು ತೂರಾಟ

ವಾರ್ತಾಭಾರತಿವಾರ್ತಾಭಾರತಿ11 Sept 2023 11:11 AM IST
share
ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದಿಂದ ಪ್ರತಿಭಟನಾ ರ‍್ಯಾಲಿ; ಬಂದ್‌ ಗೆ ಬೆಂಬಲಿಸದೆ ರಸ್ತೆಗಿಳಿದ ವಾಹನಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು, ಸೆ.11: ಹಲವು ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ, ಸೆ.11ರ ಮಧ್ಯರಾತ್ರಿ 12 ಗಂಟೆಯಿಂದಲೇ ಆಟೋ, ಟ್ಯಾಕ್ಸಿ, ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಅದಾಗ್ಯೂ, ಕಲಾಸಿಪಾಳ್ಯ ಸೇರಿದಂತೆ ಕೆಲವೆಡೆ ಆಟೋ, ಖಾಸಗಿ ಬಸ್‌ಗಳು ಎಂದಿನಂತೆ ಸಂಚಾರ ಆರಂಭಿಸಿವೆ.

ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರಕ್ಕೆ ಕರೆ ನೀಡಿದ್ದರೂ ಕೆ.ಆರ್.ಮಾರುಕಟ್ಟೆಯ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣಕ್ಕೆ ಬಂದ್ ಬಿಸಿ ತಟ್ಟಿಲ್ಲ. ಕೆಲವು ಖಾಸಗಿ ಬಸ್‌ಗಳು ಬೆಳಗ್ಗೆಯೇ ಸಂಚಾರ ಆರಂಭಿಸಿವೆ. ಆಟೋಗಳು ಸಹ ಎಂದಿನಂತೆ ಸಂಚಾರ ನಡೆಸುತ್ತಿವೆ.

ಬೆಂಗಳೂರು-ತುಮಕೂರು ಹೆದ್ದಾರಿ, ಹಾಸನ ಹೆದ್ದಾರಿ, ಹೆಸರಘಟ್ಟ ರಸ್ತೆಯಲ್ಲಿ ಖಾಸಗಿ ಬಸ್‌ಗಳು ಎಂದಿನಂತೆ ಸಂಚಾರ ಆರಂಭಿಸಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸುತ್ತಮುತ್ತ ಯಾವುದೇ ಬದಲಾವಣೆ ಆಗಿಲ್ಲ. ಆಟೋಗಳು ಸಹ ಎಂದಿನಂತೆ ಸಂಚಾರ ನಡೆಸುತ್ತಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೋಲದೇವನಹಳ್ಳಿ, ಬಾಗಲಗುಂಟೆ, ಮಾದನಾಯಕನಹಳ್ಳಿ, ನೆಲಮಂಗಲ ಉಪ ವಿಭಾಗದ ಪೊಲೀಸರು ಸ್ಥಳದಲ್ಲಿ ನಿಯೋಜನೆಗೊಂಡಿದ್ದಾರೆ.

ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ್ ಬಿಸಿ ತಟ್ಟಿಲ್ಲ. ನಿಲ್ದಾಣದಲ್ಲಿ ಹಲವು ಟ್ಯಾಕ್ಸಿಗಳು ಎಂದಿನಂತೆ ಕಾರ್ಯಾಚರಣೆ ನಡೆಸುತ್ತಿವೆ. ಏರ್ಪೋಟ್‌ನ ಕೆಎಸ್‌ಟಿಡಿಸಿ ಟ್ಯಾಕ್ಸಿಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಕೆಲವು ಟ್ಯಾಕ್ಸಿ ಚಾಲಕರಿಂದ ಪ್ರತ್ಯಕ್ಷ ಬೆಂಬಲ ವ್ಯಕ್ತವಾದರೆ, ಕೆಲವರು ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಸ್ತೆಗಿಳಿದ ವಾಹನಗಳ ಮೇಲೆ ಕಲ್ಲು ತೂರಾಟ:

ಬಂದ್ ಲೆಕ್ಕಿಸದೇ ರಸ್ತೆಗೆ ಇಳಿದ ಕೆಎಸ್‌ಟಿಡಿಸಿ ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಏರ್ಪೋರ್ಟ್ ರಸ್ತೆಯ ಚಿಕ್ಕಜಾಲ ಬಳಿ ತಡರಾತ್ರಿ ನಡೆದಿದೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಕಾರಿನ ಗ್ಲಾಸ್ ಪುಡಿಯಾಗಿದೆ. ಸದ್ಯ ಚಿಕ್ಕಜಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಚಿಕ್ಕಜಾಲ ಸೇರಿದಂತೆ ಕೆಲವಡೆ ಏರ್ಪೋಟ್ ಟ್ಯಾಕ್ಸಿ ಮೇಲೆ ಕಲ್ಲು ತೂರಾಟ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಒಲಾ ಉಬರ್ ಸೇರಿದಂತೆ ಬಸ್ ನಿಲ್ದಾಣಗಳಲ್ಲೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಅಲ್ಲದೆ, ರಸ್ತೆಗಿಳಿಯುತ್ತಿರುವ ಚಾಲಕರಿಗೆ ಪೊಲೀಸರ ಅಭಯ ಸಿಕ್ಕಿದ್ದು, ಪೊಲೀಸ್ ಭದ್ರತೆಯಲ್ಲಿ ಪ್ರಯಾಣಿಕರು ಟ್ಯಾಕ್ಸಿಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ.

ಹೆಬ್ಬಾಳದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಆದರೂ ಹೆಚ್ಚಿನ ಜನರು ಆಟೋ, ಒಲಾ ಬಿಟ್ಟು ಸರಕಾರಿ ಬಸ್ಸುಗಳತ್ತ ಮುಖ ಮಾಡುತ್ತಿದ್ದಾರೆ. ಜನರಿಗೆ ಸಮಸ್ಯೆಯಾಗದಂತೆ ಹೆಚ್ಚಿನ ಸರಕಾರಿ ಬಸ್‌ಗಳನ್ನು ರಸ್ತೆಗೆ ಇಳಿಸುತ್ತಿರುವ ಹಿನ್ನೆಲೆ, ಜನರು ಎಂದಿನಂತೆ ಸಂಚರಿಸುತ್ತಿದ್ದಾರೆ.

ಅತ್ತಿಬೆಲೆಯಲ್ಲಿ ಟಿಟಿ ವಾಹನದಲ್ಲಿ ಜನರು ಸಂಚಾರ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಕೆಲವು ಸಂಘಟನೆಗಳು, ವಾಹನ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ. ಟಿಟಿಯಿಂದ ಪ್ರಯಾಣಿಕರನ್ನು ಕೆಳಗೆ ಇಳಿಸಿ ಆಕ್ರೋಶ ಹೊರಹಾಕಿದ್ದಾರೆ.

ಆಟೋ ಚಾಲಕರಿಂದ ವಾಹನಗಳ ತಡೆ:

ಬೆಂಗಳೂರು ಜಾಲಹಳ್ಳಿ ಕ್ರಾಸ್ ಬಳಿ ಆಟೋ ಚಾಲಕರ ಪ್ರತಿಭಟನೆ ಕಾವು ಹೆಚ್ಚಾಗಿದೆ. ರಸ್ತೆಗೆ ಇಳಿದ ಆಟೋ, ಕಾರುಗಳನ್ನು ತಡೆಯುತ್ತಿರುವ ಚಾಲಕರು, ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ, ಟಯರ್‌ಗಳ ಗಾಳಿ ತೆಗೆದು ಬೆಂಗಳೂರು ಸಾರತಿ ಸೇನೆಯ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ.

ಬಂದ್ ಮಧ್ಯೆಯೂ ರಸ್ತೆಗಿಳಿದ ಆಟೋಗಳ ಪೈಕಿ ಕೆಲವು ಆಟೋ ಚಾಲಕರು ಹೆಚ್ಚಿನ ಹಣ ಪೀಕುತ್ತಿದ್ದಾರೆ. ಎಂದಿಗಿಂದ ಎರಡು ಪಟ್ಟು ಜಾಸ್ತಿ ಬಾಡಿಗೆ ಪಡೆಯುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X