Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರದ ಮಲತಾಯಿ ಧೋರಣೆಯ ವಿರುದ್ಧ ಫೆ.7...

ಕೇಂದ್ರದ ಮಲತಾಯಿ ಧೋರಣೆಯ ವಿರುದ್ಧ ಫೆ.7 ರಂದು ದಿಲ್ಲಿಯಲ್ಲಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Feb 2024 5:21 PM IST
share
ಕೇಂದ್ರದ ಮಲತಾಯಿ ಧೋರಣೆಯ ವಿರುದ್ಧ ಫೆ.7 ರಂದು ದಿಲ್ಲಿಯಲ್ಲಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ಕರ್ನಾಟಕ ಸರಕಾರವು ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳಾವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು, 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ.

ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್ ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. . ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ ಎಂದರು.

14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ತಿಳಿಸಿದರು.

ನೀರಾವರಿ ಯೋಜನೆಯಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನು ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ.

ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ, ವಿರೋಧ ಪಕ್ಷದ ಸಂಸದರಿಗೂ ಆಹ್ವಾನ

ಈ ಸಮಯದಲ್ಲಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲಾ ಪರಿಷತ್ ಸದಸ್ಯರು ಫೆ.6ರಂದು ದಿಲ್ಲಿಗೆ ತಲುಪಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ. ನಮ್ಮ ಧ್ವನಿಯನ್ನು ದಿಲ್ಲಿ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ.

ಈ ಪ್ರತಿಭಟನೆಗೆ ರಾಜ್ಯದ ಎಲ್ಲಾ ಸಂಸದರಿಗೆ ಆಹ್ವಾನ ನೀಡಲಾಗುವುದು. ಎಲ್ಲರೂ ರಾಜ್ಯದ ಹಿತ ಕಾಯಲು ಪಕ್ಷಾತೀತವಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಕುಮಾರಸ್ವಾಮಿ ಕುಟುಂಬಸ್ಥರು ಕಲ್ಲು ಹೊಡೆದಿರುವ ಪಟ್ಟಿ ಇದೆ

ಕನಕಪುರದಲ್ಲಿ ಕಲ್ಲು ಹೊಡೆಯುವವರನ್ನು ಶಾಸಕರು ಸಂಸದರನ್ನಾಗಿ ಮಾಡಿದರೆ ದೇಶ ಒಡೆಯುತ್ತಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ, ಕನಕಪುರದ ಜನರನ್ನು ಕೇಳಿ, ಅವರು ಅವರ ಮನೆಯವರೂ ಕಲ್ಲು ಹೊಡೆಯುತ್ತಿದ್ದರಲ್ಲ. ಅದರ ಪಟ್ಟಿ ನೀಡಲಾ? ಎಲ್ಲಾ ಪಟ್ಟಿ ನೀಡಲು ಕಳೆದ ಅಧಿವೇಶನದಲ್ಲಿ ಕಾದು ಕುಳಿತಿದ್ದೆ ಎಂದರು.

ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು. ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ನನಗೂ ಭಯ ಹುಟ್ಟಿಸಿದೆ ಎಂದು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X