Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದರೆ...

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಸಂಸತ್ ಭವನದ ಎದುರು ಧರಣಿ : ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ವಾರ್ತಾಭಾರತಿವಾರ್ತಾಭಾರತಿ25 Nov 2024 1:25 PM IST
share
ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಸಂಸತ್ ಭವನದ ಎದುರು ಧರಣಿ : ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಬೆಂಗಳೂರು : ಕೇಂದ್ರ ಸರಕಾರವು ವಕ್ಫ್ ತಿದ್ದುಪಡಿ ಮಸೂದೆಯನ್ನು ಯಾವುದೇ ಬದಲಾವಣೆಯಿಲ್ಲದೆ ಸಂಸತ್ತಿನಲ್ಲಿ ಅಂಗೀಕರಿಸಿದರೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಸಂಸತ್ ಭವನದ ಎದುರು ಧರಣಿ ನಡೆಸಲಾಗುವುದು ಎಂದು ಮಂಡಳಿ ರಾಷ್ಟ್ರೀಯ ವಕ್ತಾರ ಡಾ.ಎಸ್.ಕ್ಯೂ.ಆರ್.ಇಲ್ಯಾಸ್ ತಿಳಿಸಿದರು.

ಸೋಮವಾರ ನಗರದ ದಾರುಲ್ ಉಲೂಮ್ ಸಬೀಲುರ್ರಶಾದ್‌ನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮಸೂದೆ ಕುರಿತು ಪರಿಶೀಲನೆ ನಡೆಸಲು ಲೋಕಸಭಾ ಸ್ಪೀಕರ್ ರಚನೆ ಮಾಡಿದ ಜಂಟಿ ಸಂಸದೀಯ ಸಮಿತಿಗೆ ನಾವು 211 ಪುಟಗಳ ದಾಖಲಾತಿಯನ್ನು ನೀಡಿ ನಮ್ಮ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಿದ್ದೇವೆ ಎಂದು ಹೇಳಿದರು.

ಈ ಕಾನೂನು ಯಾರಿಗಾಗಿ ಜಾರಿಗೆ ಉದ್ದೇಶಿಸಲಾಗಿದೆಯೋ ಆ ಸಮುದಾಯದವೇ ವಿರೋಧ ಮಾಡುತ್ತಿರುವಾಗ ಯಾವ ಉದ್ದೇಶಕ್ಕಾಗಿ ತರಲಾಗುತ್ತಿದೆ. ಜಂಟಿ ಸಂಸದೀಯ ಸಮಿತಿಯು ಸಂಬಂಧಪಟ್ಟವರ ಜೊತೆ ಚರ್ಚೆ ಮಾಡದೆಯೇ ಇತರರ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೋರಿಕೆ ಮೇರೆಗೆ ದೇಶದ 3.66 ಕೋಟಿ ಜನ ತಮ್ಮ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ. ವಕ್ಫ್ ಆಸ್ತಿಗಳು ಸರಕಾರದ ಆಸ್ತಿಗಳಲ್ಲ. ಇದು ಮುಸ್ಲಿಂ ಪೂರ್ವಿಕರು ವಿವಿಧ ಉದ್ದೇಶಗಳಿಗೆ ದಾನ ಮಾಡಿರುವ ಭೂಮಿಯಾಗಿದೆ ಎಂದು ಅವರು ಹೇಳಿದರು.

ಧಾರ್ಮಿಕ ಸ್ಥಳಗಳ ಸಂರಕ್ಷಣಾ ಕಾಯ್ದೆ ಸಂಸತ್ತಿನಲ್ಲಿ ಪಾಸ್ ಮಾಡಲಾಗಿದೆ. 1947ರ ಆಗಸ್ಟ್ 15ರ ಮುಂಚೆ ಯಾವ ಧಾರ್ಮಿಕ ಸ್ಥಳಗಳು ಹೇಗಿದೆಯೋ ಅದು ಹಾಗೆಯೇ ಇರುತ್ತದೆ ಎಂದು ಹೇಳಲಾಗಿತ್ತು. ಆದರೆ, ಇಂದು ಪ್ರತಿ ದಿನ ಒಂದಲ್ಲ ಒಂದು ಮಸೀದಿ ಬಳಿ ಹೋಗಿ ಇದು ಮಂದಿರ ಎಂದು ಸರ್ವೆ ಮಾಡಲು ಹೋಗುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಉತ್ತರಾಖಂಡದಲ್ಲಿ ಅಲ್ಲಿನ ಸರಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ತಂದಿದೆ. ಯಾವುದೇ ರಾಜ್ಯಕ್ಕೆ ಸಮಾನ ನಾಗರಿಕ ಸಂಹಿತೆ ಜಾರಿ ತರಲು ಅಧಿಕಾರವಿಲ್ಲ. ಕೇವಲ ಸಂಸತ್ತಿಗೆ ಮಾತ್ರ ಅದರ ಅಧಿಕಾರವಿದೆ. ಆದುದರಿಂದ, ಉತ್ತರಾಖಂಡ ಸರಕಾರದ ಈ ಕಾಯ್ದೆ ಪ್ರಶ್ನಿಸಿ ನಾವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಫೆಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಕೇಂದ್ರ ಸರಕಾರ ಖಂಡನೆ ಮಾಡಬೇಕು ಎಂದು ಇಲ್ಯಾಸ್ ಹೇಳಿದರು.

ಪ್ರವಾದಿ ಮುಹಮ್ಮದ್ (ಸ) ಸೇರಿದಂತೆ ಯಾವುದೇ ಧರ್ಮದ ಪ್ರಮುಖರ ಅವಹೇಳನ ತಡೆಯಲು ಕೇಂದ್ರ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾ ಮುಹಮ್ಮದ್ ಫಝ್ಲುರ್ರಹೀಮ್ ಮುಜದ್ದಿದಿ, ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ, ಮುಖಂಡರಾದ ಅಕ್ಬರ್ ಅಲಿ, ಸುಲೇಮಾನ್ ಖಾನ್, ಡಾ.ಮುಜಾಹಿದ್ ಜಮೀಲ್, ಆಸೀಮ್ ಅಫ್ರೋಝ್ ಸೇಠ್, ಸೈಯದ್ ಸೈಫುಲ್ಲಾ, ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X