Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ...

ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು: ಹೈಕೋರ್ಟ್ ಮಹತ್ವದ ಆದೇಶ

ವಾರ್ತಾಭಾರತಿವಾರ್ತಾಭಾರತಿ18 March 2025 5:35 PM IST
share
ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

ಮಂಗಳವಾರ (ಮಾ.18) ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ.

ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರದಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಪಿಟೀಷನ್ ಸಲ್ಲಿಸಿದ್ದರು. ರಿಟ್ ಪಿಟೀಷನ್ ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಎಂ ನಾಗಪ್ರಸನ್ನ "ಪೊಲೀಸರು , ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಆದರೆ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ" ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ಧರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ನೋಟಿಸ್ ನಲ್ಲಿ ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್ ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್ ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್ ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ನ ರಿಟ್ ಆದೇಶದಲ್ಲಿ "9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ." ಎಂದು ಹೇಳಲಾಗಿದೆ. ಆದರೆ ಹೈಕೋರ್ಟ್ ರಿಟ್ ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X