Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ...

ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತ; ನಿಯಮ ಹಿಂಪಡೆಯಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 Sept 2023 11:54 PM IST
share
ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತ; ನಿಯಮ ಹಿಂಪಡೆಯಲು ಒತ್ತಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್‌ಗೆ ಸೀಮಿತವಾಗಿದ್ದು, ಇದು ಪ್ರತಿಭಟಿಸುವ ಹಕ್ಕಿಗೆ ಧಕ್ಕೆಯಾಗಿದೆ. ಈ ಮೂಲಭೂತ ಹಕ್ಕನ್ನು ಎತ್ತಿಹಿಡಿಯಬೇಕಾಗಿದೆ. ಎಲ್ಲ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಮಾತ್ರ ಸೀಮಿತಗೊಳಿಸದಿರಿ. ಸರ್ಕಾರ ಈ ನಿಯಮವನ್ನು ಹಿಂಪಡೆಯದಿದ್ದರೆ, ಅದನ್ನು ಉಲ್ಲಂಘಿಸಿ ಪ್ರತಿಭಟಿಸುತ್ತೇವೆ ಎಂದು ʼಹೋರಾಟದ ಹಕ್ಕಿಗಾಗಿ ಜನಾಂದೋಲನʼ ತಿಳಿಸಿದೆ.

ಪ್ರತಿಭಟನೆಯ ಹಕ್ಕನ್ನು ರಕ್ಷಿಸಲು, ಎತ್ತಿಹಿಡಿಯಲು ಹಲವಾರು ಪ್ರಗತಿಪರ ಮತ್ತು ಪ್ರಜಾಸತ್ತಾತ್ಮಕ ಗುಂಪುಗಳು ಹಾಗೂ ವ್ಯಕ್ತಿಗಳು ಸೇರಿ ಹೋರಾಟದ ಹಕ್ಕಿಗಾಗಿ ಜನಾಂದೋಲನವನ್ನು ಪ್ರಾರಂಭಿಸಿದ್ದಾರೆ.

“ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಆಡಳಿತದಿಂದ ತರಲಾದ ‘ಪ್ರತಿಭಟನೆಗಳು, ಪ್ರದರ್ಶನಗಳು ಮತ್ತು ಪ್ರತಿಭಟನಾ ಮೆರವಣಿಗೆಗಳ ಪರವಾನಗಿ ಮತ್ತು ನಿಯಂತ್ರಣ (ಬೆಂಗಳೂರು ನಗರ) ಆದೇಶ, 2021’ (Licensing and Regulation of Protests, Demonstrations and Protest Marches (Bengaluru City) Order, 2021) ಅನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಪ್ರತಿಭಟನೆಯ ಮೂಲಭೂತ ಹಕ್ಕನ್ನು ಚಲಾಯಿಸಿದ ಕಾರ್ಮಿಕರು, ರೈತರು, ದಲಿತ ಸಂಘಟನೆ ಕಾರ್ಯಕರ್ತರು ಮಹಿಳೆಯರು ಮತ್ತು ಇತರ ಶೋಷಿತ ಸಮುದಾಯಗಳಿಗೆ ಸೇರಿದವರ ಮೇಲೆ, ಪ್ರತಿಭಟನೆ ನಡೆಸಿದ ಕಾರಣಕ್ಕೆ ದಾಖಲಿಸಲಾದ ಎಲ್ಲ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಜನಾಂದೋಲನ ಸರ್ಕಾರಕ್ಕೆ ಒತ್ತಾಯಿಸಿದೆ.

“ಅಕ್ಟೋಬರ್ 2 ರೊಳಗೆ ಈ ನಿಯಮವನ್ನು ಹಿಂತೆಗೆದುಕೊಳ್ಳದಿದ್ದರೆ, ಅಕ್ಟೋಬರ್ 2 ರಂದು, ಕಾರ್ಮಿಕ ಸಂಘಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು, ಎಲ್‌ಜಿಬಿಟಿಕ್ಯೂಐಎ (LGBTQIA) ಸಂಘಟನೆಗಳು ಸೇರಿದಂತೆ ನಾನಾ ಪ್ರಗತಿಪರ ಸಂಘಟನೆಗಳು ಎಂ.ಜಿ. ರಸ್ತೆಯಲ್ಲಿನ ಗಾಂಧೀಜಿ ಪ್ರತಿಮೆಯಿಂದ ವಿಧಾನಸೌಧದ ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪ್ರತಿಭಟನೆಯ ಹಕ್ಕಿಗಾಗಿ ಹೋರಾಡುತ್ತೇವೆ” ಎಂದು ಸರ್ಕಾರಕ್ಕೆ ʼಹೋರಾಟದ ಹಕ್ಕಿಗಾಗಿ ಜನಾಂದೋಲನʼ ಎಚ್ಚರಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X