Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ...

ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಿ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 Sept 2023 8:03 PM IST
share
ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಿ: ಹೈಕೋರ್ಟ್

ಬೆಂಗಳೂರು, ಸೆ.7: ಯಾವುದೇ ವ್ಯಕ್ತಿಯನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬ ಕುರಿತಂತೆ ಆತನಿಗೆ ತಿಳಿದಿರುವ ಭಾಷೆಯಲ್ಲೇ ಮಾಹಿತಿ ನೀಡಬೇಕೆಂದು ಹೈಕೋರ್ಟ್ ಆದೇಶಿಸಿದೆ.

ತಮ್ಮ ಪತಿಯನ್ನು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿ ಆರೋಪಿಯ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ಅವರಿದ್ದ ಹೈಕೋರ್ಟ್‍ನ ಕಲಬುರಗಿ ವಿಭಾಗೀಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಗೊಳಿಸಿ ತಕ್ಷಣ ಬಿಡುಗಡೆಗೆ ಆದೇಶಿಸಿದೆ. ಜೊತೆಗೆ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಕೇವಲ 3ನೆ ತರಗತಿವರೆಗೆ ಓದಿದ್ದಾರೆ, ಅವರಿಗೆ ಇಂಗ್ಲಿಷ್ ತಿಳಿದಿಲ್ಲ. ಅಂತಹ ಸಂದರ್ಭದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು ಆತನಿಗೆ ತಿಳಿದಿರುವ ಭಾಷೆಯಲ್ಲೇ ದಾಖಲೆಗಳನ್ನು ಒದಗಿಸಬೇಕಾದದ್ದು ಆದ್ಯ ಕರ್ತವ್ಯ. ಹಾಗೆ ದಾಖಲೆ ಒದಗಿಸಿದರೆ ಆ ವ್ಯಕ್ತಿ ಸರಕಾರದ ಸಲಹಾ ಮಂಡಳಿಯ ಮುಂದೆ ಒಂದು ಅವಕಾಶವನ್ನು ಕೋರಬಹುದಾಗಿದೆ.

ಈ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗೆ ಗೂಂಡಾ ಕಾಯಿದೆ ಸೆಕ್ಷನ್ 3(3) ರ ಅನ್ವಯ 21 ದಿನಗಳಲ್ಲಿ ಆರೋಪಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆ ಒದಗಿಸಬೇಕು. ಆದರೆ, ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಪೀಠ ತಿಳಿಸಿದೆ.

ಅಲ್ಲದೆ, ಅರ್ಜಿದಾರರ ಪತಿಯ ಬಂಧನಕ್ಕೆ ಹೊರಡಿಸಿರುವ ಆದೇಶ ನಿಯಮ ಬದ್ಧವಾಗಿಲ್ಲ, ಬಂಧಿತನಿಗೆ ದಾಖಲೆಯನ್ನು ಆತನಿಗೆ ತಿಳಿದಿರುವ ಭಾಷೆಯಲ್ಲಿ ಒದಗಿಸಿಲ್ಲ ಎಂದು ಹೇಳಿರುವ ನ್ಯಾಯಾಲಯ, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‍ನ ಹಲವು ಆದೇಶಗಳನ್ನು ಉಲ್ಲೇಖಿಸಿ ರಾಜ್ಯ ಸರಕಾರದ ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ.

ಪ್ರಕರಣವೇನು?: ಗೂಂಡಾ ಕಾಯ್ದೆ ಅಡಿ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿಯ ಹುಚ್ಚಪ್ಪ ಎಂಬವರನ್ನು ಬಂಧಿಸಲು ವಿಜಯಪುರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ನೀಡಿತ್ತು. ಅದನ್ನು ಸರಕಾರ ಖಚಿತಪಡಿಸಿ, 12 ತಿಂಗಳು ಬಂಧನದಲ್ಲಿಡಲು ಆದೇಶ ನೀಡಿತ್ತು.

ಈ ಕ್ರಮವನ್ನು ಪ್ರಶ್ನಿಸಿ ಅರ್ಜಿದಾರರ ಪತ್ನಿಯು, ಪತಿಯನ್ನು 12 ತಿಂಗಳು ಸೆರೆವಾಸದಲ್ಲಿಡಲು ಮಾಡಿರುವ ಆದೇಶ ಅಕ್ರಮ ಹಾಗೂ ಕಾನೂನು ಬಾಹಿರ. ಗೂಂಡಾ ಕಾಯ್ದೆ ಸೆಕ್ಷನ್ 3(2)ರಡಿ ಮೊದಲಿಗೆ ಮೂರು ತಿಂಗಳು ಮಾತ್ರ ಬಂಧನ ಆದೇಶ ಹೊರಡಿಸಬಹುದು ಮತ್ತು ಆ ನಂತರ ಅಗತ್ಯಬಿದ್ದರೆ ಮೂರು ತಿಂಗಳು ವಿಸ್ತರಣೆ ಮಾಡಬಹುದು ಎಂದು ಆಕ್ಷೇಪಿಸಿದ್ದರು.

ಅಲ್ಲದೆ, ಗೂಂಡಾ ಕಾಯ್ದೆಯ ನಿಯಮಗಳಂತೆ ವ್ಯಕ್ತಿಯನ್ನು ಬಂಧಿಸಿದ ಕೂಡಲೇ 21 ದಿನಗಳಲ್ಲಿ ಏಕೆ ಬಂಧಿಸಲಾಗಿದೆ ಎಂಬ ವಿವರಗಳುಳ್ಳ ದಾಖಲೆಗಳನ್ನು ತಿಳಿದಿರುವ ಭಾಷೆಯಲ್ಲಿಯೇ ನೀಡಬೇಕಾಗಿದೆ. ಆದರೆ ಆ ರೀತಿ ದಾಖಲೆ ಒದಗಿಸದೆ ಅರ್ಜಿದಾರರ ಹಕ್ಕು ಮೊಟಕುಗೊಳಿಸಲಾಗಿದೆ ಎಂದು ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X