Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ಬಡವರ...

ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿ.ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 Dec 2023 4:04 PM IST
share
ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ಬಡವರ ಮಕ್ಕಳಿಗೆ  ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿ.ಕೆ ಶಿವಕುಮಾರ್

ಬೆಂಗಳೂರು: "ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸೋಮವಾರ ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಹಾಗೆಯೇ ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ. ನಮಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ ಎಂದರು.

"ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲಾ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ" ಎಂದು ತಿಳಿಸಿದರು.

ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಕೇಳಿದಾಗ, "ಕನ್ನಡ ಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ ನಲ್ಲಿ ಶೇ60 ರಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು" ಎಂದು ತಿಳಿಸಿದರು.

ಹಿಜಾಬ್ ವಿಚಾರವಾಗಿ ಆಲೋಚನೆ ಮಾಡಿಲ್ಲ

" ನಾವು ಆ ವಿಚಾರವಾಗಿ ಆಲೋಚನೆ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡ ವಿಷಯ ಮಾಡುತ್ತಿವೆ. ಹಿಜಾಬ್ ವಿಚಾರವಾಗಿ ಚರ್ಚೆಗೆ ಬರುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ?" ಎಂದು ಪ್ರಶ್ನಿಸಿದರು.

ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ ಬಗ್ಗೆ ಕೇಳಿದಾಗ, "ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ" ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X