Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. PSI ನೇಮಕಾತಿ ಹಗರಣ: ಅಮೃತ್ ಪೌಲ್‌ಗೆ...

PSI ನೇಮಕಾತಿ ಹಗರಣ: ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು

ವಾರ್ತಾಭಾರತಿವಾರ್ತಾಭಾರತಿ25 Sep 2023 12:08 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
PSI ನೇಮಕಾತಿ ಹಗರಣ: ಅಮೃತ್ ಪೌಲ್‌ಗೆ ಹೈಕೋರ್ಟ್‌ ನಿಂದ ಜಾಮೀನು

ಬೆಂಗಳೂರು, ಸೆ.25: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.

ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರಕಾರದ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್ ವಾದ ಮಂಡಿಸಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.

ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅ.7, 8 ಮತ್ತು 16ರಂದು ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದೇ ಇಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.

ಹಾಗೆಯೇ, ಆ ದಿನಗಳಲ್ಲಿ ಸ್ಟಾçಂಗ್ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಾದ ಮಂಡಿಸಿದರು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಎಸ್.ಶ್ಯಾಮಸುಂದರ್, ಪ್ರಕರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ(ಸಿಆರ್‌ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ.

ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೆಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು. ಅಲ್ಲದೆ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿಯಲ್ಲಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.

ಪ್ರಕರಣವೇನು?: ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪವಿದೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದರು. ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X