Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್...

ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ20 July 2023 10:15 PM IST
share
ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಗೆ ಅನುಮೋದನೆ

ಬೆಂಗಳೂರು, ಜು.20: ಸರಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ‘ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) 2023’ಕ್ಕೆ ಗುರುವಾರ ವಿಧಾನಸಭೆಯಲ್ಲಿ ಅನುಮೋದನೆ ದೊರೆಯಿತು.

ವಿಧೇಯಕ ಮಂಡಿಸಿ ವಿವರಣೆ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, 1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಸರಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರಕಾರದ ಅನುಮತಿ ತೆಗೆದುಕೊಂಡಿರಬೇಕು ಎಂದರು.

ಒಂದು ವೇಳೆ ಅನುಮತಿಯಿಲ್ಲದೆ ಮಾರಾಟ ಮಾಡಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಅವರಿಗೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಇಂದಿರಾಗಾಂಧಿ ನೇತೃತ್ವದ ಸರಕಾರ ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಸರಕಾರದ ಅನುಮತಿಯಿಲ್ಲದೆ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು ಎಂದು ಅವರು ಹೇಳಿದರು.

ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲ ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದರು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಮತ್ತು ಕಂದಾಯ ಸಚಿವ ಬಸವಲಿಂಗಪ್ಪ ಮಸೂದೆ ಮಂಡಿಸಿದರು. 1978 ರಿಂದ ಈ ಕಾನೂನು ಜಾರಿಯಲ್ಲಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಈ ಕಾನೂನಿನ ಅನ್ವಯ ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು. ಆದರೆ ಸಹಾಯಕ ಆಯುಕ್ತರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು. ಕೊನೆಗೆ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್ ಸೆಕ್ಷನ್ 5 ರಲ್ಲಿ ಕಾಲಮಿತಿ ನಿಗದಿ ಮಾಡಿಲ್ಲ ಅನ್ನುವ ನ್ಯೂನತೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದ್ದ ಹಕ್ಕನ್ನು ಕೊಡಲಾಗಿಲ್ಲ ಎಂದು ತಿಳಿಸಿದೆ ಎಂದು ಅವರು ವಿವರಿಸಿದರು.

ಆದರೆ ಮೂಲ ಕಾನೂನಿನಲ್ಲಿ ಯಾವತ್ತೇ ಭೂಮಿ ಮಂಜೂರಾಗಿದ್ದರೂ, ಯಾವತ್ತೂ ಪರಬಾರೆಯಾಗಿದ್ದರೂ ಸಹ ಯಾವತ್ತು ಬೇಕಾದರೂ ಪ್ರಶ್ನಿಸಿ ಪರಬಾರೆ ಮಾಡಿಕೊಳ್ಳಬೇಕು ಎಂದಿದೆ. ಆದರೆ ಕಾನೂನಿನಲ್ಲಿ ಕಾಲಮಿತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ಸಹಾಯಕ ಆಯುಕ್ತರು ಸುಪ್ರೀಂ ಕೋರ್ಟ್‍ನ ಈ ಆದೇಶ ಇಟ್ಟುಕೊಂಡು ಕಾಲಮಿತಿ ಮೀರಿದೆ ಎಂಬ ನೆಪ ಹೇಳಿ ಅರ್ಜಿಗಳನ್ನು ತಳ್ಳಿಹಾಕುವುದು ನಡೆಯುತ್ತಿದೆ ಎಂದು ಅವರು ಹೇಳಿದರು.

2017 ರಿಂದ ದಲಿತ ಸಮುದಾಯಗಳು ಈ ಕಾನೂನಿನ ನ್ಯೂನತೆ ಸರಿಪಡಿಸಲು ತಿದ್ದುಪಡಿ ತರಲು ಹೋರಾಟ, ಧರಣಿ ಮಾಡುತ್ತಾ ಬಂದಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳಿಗೂ ಮನವಿ ಮಾಡಿದ್ದಾರೆ. ನಾವು ವಿರೋಧ ಪಕ್ಷದಲ್ಲಿದ್ದಾಗಲೇ, ‘ನಮ್ಮ ಸರಕಾರ ಬಂದ ಕೂಡಲೇ ನ್ಯೂನತೆ ಸರಿಪಡಿಸಿ, 1978ರ ಮೂಲ ಕಾನೂನಿಗೆ ಜೀವ ತುಂಬುತ್ತೇವೆ' ಎಂದು ಭರವಸೆ ನೀಡಿದ್ದೇವು ಎಂದು ಕೃಷ್ಣಭೈರೇಗೌಡ ಹೇಳಿದರು.

ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‍ರವರು ಚಿತ್ರದುರ್ಗದ ಸಮಾವೇಶದಲ್ಲಿ ದಲಿತರಿಗೆ ಈ ಮಾತನ್ನು ಕೊಟ್ಟಿದ್ದೆವು. ಬಿಜೆಪಿ 4 ವರ್ಷ ಅಧಿಕಾರದಲ್ಲಿದ್ದೂ ಏನು ಮಾಡಿಲ್ಲ. ಫೆಬ್ರವರಿ ತಿಂಗಳಲ್ಲಿ ಅವರ ಮಂಡಿಸಿದ ಬಜೆಟ್‍ನಲ್ಲಿ ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವುದಾಗಿ ಪೆÇಳ್ಳು ಭರವಸೆ ನೀಡಿದ್ದರು. ಆದರೆ ನ್ಯಾಯ ಕೊಡದೇ ಅನ್ಯಾಯ ಮುಂದುವರೆಸಿದ್ದರು ಎಂದು ಅವರು ಹೇಳಿದರು.

ನಮ್ಮ ಸರಕಾರ ಮಾತು ಕೊಟ್ಟಂತೆ ಮುಖ್ಯಮಂತ್ರಿ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದರು. ಮೊದಲನೆ ಅಧಿವೇಶನದಲ್ಲಿಯೆ ನಾವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಂಡಿಸುತ್ತಿದ್ದೇವೆ. ಸೆಕ್ಷನ್ 5(1)ಸಿ ನಲ್ಲಿ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳನ್ನು ರದ್ದುಪಡಿಸಲು ಯಾವುದೇ ಕಾಲಮಿತಿ ಇರತಕ್ಕದ್ದಲ್ಲ ಎಂಬ ತಿದ್ದುಪಡಿ ಸೇರಿಸಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಇದು ಪ್ರಕರಣಗಳು ಯಾವ ನ್ಯಾಯಾಲಯದಲ್ಲಿ ಇರಲಿ, ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ. ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‍ಗಳಿಗೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದರು.

ಮಸೂದೆ ಕುರಿತು ಮಾತನಾಡಿದ ಕಾಂಗ್ರೆಸ್ ಸದಸ್ಯ ಪಿ.ಎಂ.ನರೇಂದ್ರ ಸ್ವಾಮಿ, 2017ರಿಂದ ಈಗಾಗಲೇ ದಲಿತರ ವಿರುದ್ಧವಾಗಿ ತೀರ್ಪು ಬಂದಿರುವ ಪ್ರಕರಣಗಳಿಗೂ ಈ ಕಾಯ್ದೆ ಅನ್ವಯವಾಗುವಂತೆ ತಿದ್ದುಪಡಿ ತರಬೇಕು. ಇಲ್ಲದಿದ್ದರೆ ಬಹಳಷ್ಟು ಜಮೀನು ಈಗಾಗಲೇ ದಲಿತರಿಂದ ಕಿತ್ತುಕೊಳ್ಳಲಾಗಿದೆ, ಅದು ವಾಪಸ್ ಬರುವುದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, 2017ರಿಂದ ಇತ್ತೀಚೆಗೆ 1558 ಪ್ರಕರಣಗಳು ಖರೀದಿದಾರರ ಪರವಾಗಿ ಇತ್ಯರ್ಥವಾಗಿವೆ. 1003 ಪ್ರಕರಣಗಳು ಪರಿಶಿಷ್ಟರ ಪರವಾಗಿ ಇತ್ಯರ್ಥವಾಗಿವೆ. ಗಮನಿಸಿಬೇಕಾದ ವಿಚಾರವೆಂದರೆ ಕಾನೂನಿನಲ್ಲಿ ಡಿಸಿಗಳಿಗೆ ಅಪೀಲ್ ಹೋಗುವ ಪವರ್ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಮುಂದೆ 2303 ಅಪೀಲ್‍ಗಳು ಹೋಗಿವೆ ಎಂದರು.

ಹೈಕೋರ್ಟ್‍ನಲ್ಲಿ 719 ಅಪೀಲ್‍ಗಳು ಇವೆ. ಎಸಿ ಕೋರ್ಟ್‍ನಲ್ಲಿ ಮೂಲ ಮಂಜೂರುದಾರರ ವಿರುದ್ಧ ಆಗಿದ್ದರೂ ಅವರು ಮೇಲ್ಮನವಿ ಹೋಗಿದ್ದಾರೆ. ಹಾಗಾಗಿ ಆ ಪ್ರಕರಣಗಳಿಗೂ ಈ ತಿದ್ದುಪಡಿ ಅನ್ವಯಿಸುವುದರಿಂದ ಶೇ.95ರಷ್ಟು ಪ್ರಕರಣಗಳಿಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.

ಆನಂತರ, ವಿಧೇಯಕದ ಕುರಿತು ಕಾಂಗ್ರೆಸ್ ಸದಸ್ಯರಾದ ಎಸ್.ಎನ್.ನಾರಾಯಣಸ್ವಾಮಿ, ಪ್ರಸಾದ್ ಅಬ್ಬಯ್ಯ, ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಇನ್ನಿತರರು ಬೆಂಬಲಿಸಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X