Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಾಧ್ಯಮಗಳಲ್ಲಿ ಎಚ್ಚರಿಕೆಯಿಂದ ವರದಿ...

ಮಾಧ್ಯಮಗಳಲ್ಲಿ ಎಚ್ಚರಿಕೆಯಿಂದ ವರದಿ ಪ್ರಕಟಿಸಿ: ಹೈಕೋರ್ಟ್‌ ಸಲಹೆ

ವಾರ್ತಾಭಾರತಿವಾರ್ತಾಭಾರತಿ4 Aug 2023 9:46 PM IST
share
ಮಾಧ್ಯಮಗಳಲ್ಲಿ ಎಚ್ಚರಿಕೆಯಿಂದ ವರದಿ ಪ್ರಕಟಿಸಿ: ಹೈಕೋರ್ಟ್‌ ಸಲಹೆ

ಬೆಂಗಳೂರು, ಆ.4: ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರಲಿದ್ದು, ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವ ಜವಾಬ್ದಾರಿ ಪತ್ರಕರ್ತರ ಮೇಲಿರಲಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಅತ್ಯಂತ ಯೋಗ್ಯ ವಿಧಾನದಲ್ಲಿ ಸುದ್ದಿಗಳನ್ನು ಪ್ರಕಟಿಸಬೇಕು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿರುವ ಪ್ರಕರಣ ರದ್ದು ಕೋರಿ ವಿವಿಧ ಪತ್ರಿಕೆಗಳ ಸಂಪಾದಕರು ಮತ್ತು ವರದಿಗಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಮಾಧ್ಯಮಗಳಲ್ಲಿ ತಾಲಿಬಾನ್, ಗೂಂಡಾ, ಪುಂಡಾಟಿಕೆ ಎಂಬ ಪದಗಳ ಬಳಕೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವಿರುದ್ಧವಾಗಿದೆ ಎಂದು ತಿಳಿಸಿದೆ.

ಪತ್ರಕರ್ತರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಾರ್ವಜನಿಕರ ಅಗತ್ಯಗಳನ್ನು ಪೂರೈಸುತ್ತವೆ. ಈ ಸುದ್ದಿಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ. ಹೀಗಾಗಿ ಸುದ್ದಿಮಾಧ್ಯಮಗಳು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸೂಚಿಸಿದೆ.

ಪತ್ರಿಕೆಯಲ್ಲಿ ಪ್ರಕಟಿಸಿದ ಸುದ್ದಿಯನ್ನು ದೃಢೀಕರಣ ಅಥವಾ ಪರಿಶೀಲಿಸಿದ ಬಳಿಕ ಸತ್ಯವೆಂದು ನಂಬುವಂತಹ ವರ್ಗ ಇಂದಿಗೂ ಸಮಾಜದಲ್ಲಿ ಇದೆ. ಮಾಧ್ಯಮಗಳ ಮೇಲೆ ದೇಶದ ಜನಸಾಮಾನ್ಯರು ವಿಶ್ವಾಸವಿಟ್ಟಿರುವ ಆದೇಶಿಸಿದೆ.

ಸಂದರ್ಭದಲ್ಲಿ ವರದಿ ಮಾಡುವ ವೇಳೆ ಅಸಂಸದೀಯ ಅಥವಾ ಅವಹೇಳನಾಕಾರಿ ಪದಗಳನ್ನು ಬಳಸುವಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಕಾರ್ಯನಿರ್ವಹಿಸುವವರ ಜವಾಬ್ದಾರಿ ಮೇಲಿದೆ. ಅತ್ಯಂತ ಸಂಯಮದಿಂದ ತನ್ನ ಕಾರ್ಯವನ್ನು ನಿರ್ವಹಿಸಬೇಕು ಎಂದು ಪೀಠ ಹೇಳಿದೆ.

ಪ್ರಸ್ತುತದ ಪ್ರಕರಣ 2012ರಲ್ಲಿ ನಡೆದಿದೆ. ಈಗಾಗಲೇ ಅರ್ಜಿದಾರರು ಪ್ರಮಾಣ ಪತ್ರದ ಮೂಲಕ ಬೇಷರತ್ ಕ್ಷಮೆಯಾಚಿಸಿದ್ದು, ಮುಂದೆ ಈ ರೀತಿಯ ಘಟನೆಗಳನ್ನು ಪುನರಾವರ್ತನೆ ಮಾಡದಂತೆ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅತ್ಯಂತ ಎಚ್ಚರಿಕೆಯಿಂದ ಸುದ್ದಿ ಪ್ರಕಟಿಸುತ್ತಾರೆ ಎಂಬುದಾಗಿ ಭರವಸೆಯಿದೆ ಎಂದು ತಿಳಿಸಿ ಪ್ರಕರಣ ರದ್ದುಪಡಿಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X