ದ್ವಿತೀಯ ಪಿಯುಸಿ ಕ್ರೋಢೀಕೃತ ಫಲಿತಾಂಶ ಪ್ರಕಟ : ಶೇ.84.87ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಸಾಂದರ್ಭಿಕ ಚಿತ್ರ
ಬೆಂಗಳೂರು : 2024ರ ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ರ ಕ್ರೋಢೀಕೃತ ಫಲಿತಾಂಶ ಪ್ರಕಟವಾಗಿದ್ದು, 2024ರ ದ್ವಿತೀಯ ಪಿಯುಸಿಯಲ್ಲಿ ಶೇ.84.87ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,04,920 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, 5,58,283 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ಪರೀಕ್ಷೆಗೆ ಹೊಸದಾಗಿ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಫಲಿತಾಂಶ ಶೇ.89.98, ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಶೇ.40.18, ಖಾಸಗಿ ಅಭ್ಯರ್ಥಿಗಳ ಫಲಿತಾಂಶ ಶೇ.58.47ರಷ್ಟು ದಾಖಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದು, ಶೇ.93.63ರಷ್ಟು ಫಲಿತಾಂಶ ದಾಖಲಾಗಿದೆ. ವಾಣಿಜ್ಯ ಶೇ.84.18, ಕಲಾ ವಿಭಾಗದಲ್ಲಿ ಶೇ.73.27ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಬಾಲಕಿಯರ ಫಲಿತಾಂಶ ಬಾಲಕರ ಫಲಿತಾಂಶಕ್ಕಿಂತ ಹೆಚ್ಚಾಗಿದ್ದು, ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 3,35,215 ಬಾಲಕರು ಪರೀಕ್ಷೆಯನ್ನು ಬರೆದಿದ್ದು, ಶೇ.80.95 ಮಂದಿ ಉತ್ತೀರ್ಣರಾಗಿದ್ದಾರೆ. 3,69,708 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದು, ಶೇ.88.43 ಮಂದಿ ಉತ್ತೀರ್ಣರಾಗಿದ್ದಾರೆ. ಇನ್ನು ನಗರದ ವಿದ್ಯಾರ್ಥಿಗಳು ಶೇ.84.95ರಷ್ಟು ಉತ್ತೀರ್ಣರಾಗಿದ್ದರೆ, ಗ್ರಾಮೀಣ ಭಾಗದಲ್ಲಿ ಶೇ.84.58ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕರಾವಳಿ ಜಿಲ್ಲೆಗಳೇ ಮೇಲುಗೈ: 2024ರ ದ್ವಿತೀಯ ಪಿಯುಸಿಯಲ್ಲಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದು, ಶೇ.98.59ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿಯಲ್ಲಿ ಶೇ.98.45, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.94.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊಡುಗು ಜಿಲ್ಲೆಯಲ್ಲಿ ಶೇ.93.76ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಯಚೂರು ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಶೇ.78.12ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.







