Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪುನೀತ್ ಸ್ಮಾರಕ ಪುನರಾಭಿವೃದ್ಧಿ:...

ಪುನೀತ್ ಸ್ಮಾರಕ ಪುನರಾಭಿವೃದ್ಧಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ16 Oct 2023 11:09 PM IST
share
ಪುನೀತ್ ಸ್ಮಾರಕ ಪುನರಾಭಿವೃದ್ಧಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್‍ರಾಜ್ ಕುಮಾರ್ ಅವರು ಮಾಡಿರುವ ಮನವಿಗೆ ನಮ್ಮ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಸೋಮವಾರ ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಕರ್ನಾಟಕ ರತ್ನ ಡಾ.ಪುನೀತ್‍ರಾಜ್ ಕುಮಾರ್ ಅವರ -ಸಂಗ್ರಹಣೀಯ ಶಿಲ್ಪಗಳನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಪುನೀತ್ ಸಾವು ಕರುನಾಡಿಗೆ ಆಗಿರುವ ನಷ್ಟ: ನನಗೂ ಪುನೀತ್ ರಾಜ್ ಕುಮಾರ್ ಅವರು ಬಹಳ ಗೌರವದಿಂದ ಕಾಣುತ್ತಿದ್ದರು. ದೊಡ್ಡವರನ್ನು ಸಹಕಲಾವಿದರನ್ನು ಗೌರವದಿಂದ ಕಾಣುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಕಿರಿಯ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಇಡೀ ಕರುನಾಡಿಗೆ ಆಗಿರುವ ನಷ್ಟ. ಆ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಉತ್ತಮ ನಟ ಹಾಗೂ ಮಾನವೀಯತೆಯುಳ್ಳ ವ್ಯಕ್ತಿಯನ್ನು ನಾಡು ಕಳೆದುಕೊಂಡಿದೆ. ಅವರ ಪ್ರತಿಮೆಯಿಂದ ಪುನೀತ್ ಅವರನ್ನು ಇನ್ನಷ್ಟು ಸ್ಮರಿಸುವ ಕೆಲಸವಾಗಿದೆ ಎಂದರು.

ಕೆಟ್ಟದ್ದನ್ನು ಬಯಸಿಲ್ಲ: ರಾಜ್‍ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ. ಕೆಟ್ಟ ಪದ ಬಳಸಿಲ್ಲ. ಪುನೀತ್ ರಾಜ್‍ಕುಮಾರ್, ಅವರ ತಂದೆ ರಾಜ್ ಕುಮಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದರು. ರಾಜ್‍ಕುಮಾರ್ ಜನಪ್ರಿಯ ಮೇರು ನಟ. ಪುನೀತ್ ತೀರಿಕೊಂಡಾಗ ಜನರ ಭಾವನೆಗಳನ್ನು ಕಂಡಾಗ, ರಾಜ್ ಕುಮಾರ್ ಅವರಿಗಿಂತಲೂ ಜನಪ್ರಿಯರಾಗಿದ್ದರು ಎಂಬ ಭಾವನೆ ಬಂದಿತು ಎಂದರು.

ಪುನೀತ್ ಮರಣ ಹೊಂದಿದಾಗ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ, ಕಟೌಟ್ ಹಾಕಿ ಗೋಳಾಡಿದ್ದು ಕಂಡಾಗ ಪುನೀತ್ ಅವರ ಜನಪ್ರಿಯತೆ, ಅಪಾರ ಅಭಿಮಾನಿಗಳನ್ನು ಪಡೆದಿದ್ದರು ಎಂದು ತಿಳಿಯುತ್ತದೆ. ಬಹಳ ಬೇಗ ನಮ್ಮನ್ನು ಅಗಲಿದರು. ಅವರು ಬದುಕಿದ್ದರೆ, ನಾವು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು ಎಂದರು.

ಮನೆಯ ಮಗ: ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ನೋವನ್ನು ಭರಿಸುವ ಶಕ್ತಿ ದೇವರು ಯಾವಾಗಲೂ ನೀಡಬೇಕು ಎಂದರು. ಪುನೀತ್ ರಾಜ್ ಕುಮಾರ್ ಮನೆ ಮನೆಯ ಮಗ. ಅವರನ್ನು ಗೌರವಿಸದವರೇ ಇಲ್ಲ ಎಂದರು.

ಅಪರೂಪದ ವ್ಯಕ್ತಿತ್ವ: ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದೆ. ಡಾ.ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿತ್ವ. ಸರಳ, ಸಜ್ಜನಿಕೆ, ವಿನಯ ಕಾಣುವುದು ವಿರಳ. ಅವರ ಅಭಿಮಾನಿ ಬಳಗ ಬಹಳ ದೊಡ್ಡದು. ರಾಜ್‍ಕುಮಾರ್ ಕುಟುಂಬದವರು ಸದಾ ವಿನಯವಂತರು. ರಾಜಕುಮಾರ್, ಅವರ ಮಕ್ಕಳು ಮಾನವೀಯತೆಯ ಪ್ರತಿರೂಪವಾಗಿದ್ದಾರೆ. ಮಾನವೀಯತೆಯುಳ್ಳವರು ಮತ್ತೊಬ್ಬರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ. ರಾಜ್ ಕುಮಾರ್ ಸೇರಿದಂತೆ ಅವರ ಕುಟುಂಬದವರೊಂದಿಗೆ ತಮಗೆ ಉತ್ತಮ ಒಡನಾಟವಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X