ವಿವಿಗಳಲ್ಲಿ ಒಂದು ಸಾವಿರ ಬೋಧಕ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ: ಸಚಿವ ಡಾ.ಸುಧಾಕರ್

ಬೆಂಗಳೂರು : ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಸೋಮವಾರ ವಿಧಾನಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ಖಾಲಿಯಿರುವ 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್‍ನಲ್ಲಿ ಮಂಜೂರಾತಿ ದೊರೆತಿದೆ. ಆಯಾ ವಿವಿಗಳ ಕುಲಪತಿಗಳ ಜೊತೆ ಚರ್ಚಿಸಿ ಅಗತ್ಯವಿರುವ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಾಗತಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ವ್ಯಾಪ್ತಿಯ ಸರಕಾರಿ ಕಾಲೇಜುಗಳ ಕಲಿಕಾ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಿಜಿಟಲ್ ಕಲಿಕೆ, ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ, ಕಲಿಕೆ ಜೊತೆ ಕೌಶಲ್ಯ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಎಂ.ಸಿ.ಸುಧಾಕರ್ ಹೇಳಿದರು.
Next Story





