Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳದ ಮುಸುಕುಧಾರಿಯ ಹೆಸರು...

ಧರ್ಮಸ್ಥಳದ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ : ಆರ್‌.ಅಶೋಕ್‌ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Aug 2025 5:50 PM IST
share
ಧರ್ಮಸ್ಥಳದ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ : ಆರ್‌.ಅಶೋಕ್‌ ಆಗ್ರಹ
"ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಎನ್‌ಐಎ ತನಿಖೆಗೆ ವಹಿಸಿ"

ಬೆಂಗಳೂರು, ಆ.14 : ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರಕಾರ ಬಹಿರಂಗಪಡಿಸಬೇಕು. ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೊನೆಯಲ್ಲಿ ಮಾಸ್ಕ್‌ ಮ್ಯಾನ್‌ ಹುಚ್ಚ ಎಂದು ಹೇಳುವ ಬದಲು, ಮೊದಲೇ ತನಿಖೆ ಮಾಡಬೇಕು. ಈವರೆಗೆ ಆತನ ಮಂಪರು ಪರೀಕ್ಷೆ ಮಾಡಿಲ್ಲ. ಈವರೆಗೆ ಒಂದು ಕೋಟಿ ರೂ.ಗೂ ಅಧಿಕ ಖರ್ಚಾಗಿದೆ. ಹಿಟಾಚಿ, ಜೆಸಿಬಿಗಳನ್ನು ಬಳಸುತ್ತಿದ್ದಾರೆ. ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದಾರೆ. ಇದು ಪ್ರಾಯೋಜಿತವಾದ ಕೆಲಸವಾಗಿದೆ. ಈ ಮುಸುಕುಧಾರಿ ಯಾರೆಂದು ಸರಕಾರ ತಿಳಿಸಬೇಕು ಎಂದು ಆಗ್ರಹಿಸಿದರು.

ಅಪರಾಧಿ ಚಟುವಟಿಕೆಗಳಿಗೆ ಅಪರಾಧಿಗಳಿಗೆ ಖಂಡಿತ ಶಿಕ್ಷೆಯಾಗುತ್ತದೆ. ಅನೇಕ ಪ್ರಕರಣಗಳಲ್ಲಿ ಮುಖ್ಯಮಂತ್ರಿಗೇ ಶಿಕ್ಷೆಯಾಗಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ಯಾರನ್ನೂ ಬಿಡುವುದಿಲ್ಲ. ಎಸ್‌ಐಟಿ ರದ್ದು ಮಾಡದೆ ಮುಂದುವರಿಸಬೇಕು. ತನಿಖೆ ಮಾಡಬೇಕು. ಹಾಗೆಯೇ ಯಾರ ಒತ್ತಡದ ಮೇಲೆ ಈ ಎಸ್‌ಐಟಿ ರಚಿಸಲಾಗಿದೆ ಎಂದು ತಿಳಿಸಬೇಕು. ಇದಕ್ಕೆ ವಿದೇಶದಿಂದ ಫಂಡಿಂಗ್‌ ಬಂದಿರುವ ಅನುಮಾನವಿದ್ದು, ಷಡ್ಯಂತ್ರ ಮಾಡಿರುವ ಗುಂಪನ್ನು ಪತ್ತೆ ಮಾಡಲು ಎನ್‌ಐಎಗೆ ತನಿಖೆಯನ್ನು ನೀಡಿ ಎಂದು ಒತ್ತಾಯಿಸಿದರು.

ಧರ್ಮಸ್ಥಳದಲ್ಲಿ ನೂರಾರು ಅಸ್ತಿಪಂಜರ ಇದೆ ಎಂದು ದೂರು ನೀಡಿದಾಗ ಕಾಂಗ್ರೆಸ್‌ ಸರಕಾರ ಕೂಡಲೇ ಎಸ್‌ಐಟಿ ರಚಿಸಿದೆ. ಎಸ್‌ಐಟಿ ಮಾಡಬೇಕೆಂದು ಕೋರ್ಟ್‌ ಹೇಳಿಲ್ಲ ಅಥವಾ ಅಧಿಕಾರಿ ಪ್ರಣವ್‌ ಮೊಹಂತಿ ಹೇಳಿಲ್ಲ. ಇದರ ಹಿಂದೆ ಇರುವ ಗ್ಯಾಂಗ್‌ ಯಾವುದು? ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುತ್ತ ಇರುವ ಗ್ಯಾಂಗ್‌ ಯಾವುದು? ಇದಕ್ಕೆ ಪ್ರೇರಣೆ ನೀಡಿದವರು ಯಾರು? ಈ ರೀತಿ ನೆಲ ಅಗೆಯುವುದಕ್ಕೆ ಸಾರ್ವಜನಿಕ ಹಣ ಬಳಸಲಾಗಿದೆ. ಆದರೆ ಬೆಟ್ಟ ಅಗೆದು ಇಲಿ ಹಿಡಿಯುವಂತಹ ಕೆಲಸವಾಗಿದೆ. ಹುಲಿ ಬಂತು ಎಂದು ಹೆದರಿಸಿ ಕೊನೆಗೆ ಇಲಿಯೂ ಸಿಕ್ಕಿಲ್ಲ ಎಂದು ದೂರಿದರು.

ಮಾಸ್ಕ್‌ ಮ್ಯಾನ್‌ ಬಗ್ಗೆ ಪ್ರತಿ ಕ್ಷಣದ ಮಾಹಿತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಆ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಆತನ ಹೆಸರು ಚಿನ್ನಯ್ಯ, ಕ್ರೈಸ್ತ ಧರ್ಮಕ್ಕೆ ಮತಾಂತರವಾದವನು ಎಂದು ಜನರು ಹೇಳುತ್ತಿದ್ದಾರೆ. ಪೊಲೀಸರು ಪ್ರತಿ ದಿನ ಆತನಿಗೆ ಮೇಕಪ್‌ ಮಾಡಿ, ಬಿರಿಯಾನಿ ತಿನ್ನಿಸಿ, ಸಂಪೂರ್ಣ ಭದ್ರತೆ ನೀಡಿ ಕರೆದೊಯ್ಯುತ್ತಿದ್ದಾರೆ. ಆತ ಇವೆಲ್ಲವನ್ನೂ ಎಂಜಾಯ್‌ ಮಾಡುತ್ತಿದ್ದಾರೆ. ಆತ ಹೇಳಿದ ಕಡೆಯಲ್ಲ ಪೊಲೀಸರು ನೆಲ ಅಗೆದರು. ನಂತರ ಒಂದೂವರೆ ಲಕ್ಷ ರೂ. ಖರ್ಚು ಮಾಡಿ ಡ್ರೋಣ್‌ ಹಾಗೂ ಇತರೆ ಯಂತ್ರಗಳನ್ನು ಬಳಸಿದರು. 20 ಅಡಿ ಆಳದಲ್ಲಿ ಯಾರಾದರೂ ಹೆಣ ಹೂಳುತ್ತಾರಾ? ಸರಕಾರಕ್ಕೆ ಅಷ್ಟೂ ಸಾಮಾನ್ಯ ಪ್ರಜ್ಞೆ ಇಲ್ಲವೇ ಎಂದು ಪ್ರಶ್ನಿಸಿದರು.

ಒಬ್ಬ ವ್ಯಕ್ತಿ ಆರಡಿ ಅಗೆಯಬೇಕೆಂದರೂ ಅದು ಬಹಳ ಕಷ್ಟ. ಆದರೆ ಈ ವ್ಯಕ್ತಿ ಒಬ್ಬನೇ ಇಷ್ಟು ಕೆಲಸವನ್ನು ಮಾಡಿದ್ದಾನೆ ಎಂದರೆ ಇದನ್ನು ಚಂದಾಮಾಮ ಕಥೆ ಎಂದೇ ಹೇಳಬೇಕು. ಈತ ಹೆಣವನ್ನು ಹೆಗಲ ಮೇಲೆ ಹೊತ್ತುಕೊಂಡು ಒಬ್ಬನೇ ಕಾಡಿಗೆ ಹೋಗಿದ್ದಾನೆ ಎಂದರೆ ನಂಬಲು ಸಾಧ್ಯವಿಲ್ಲ. ಈಗ ಅಗೆದಿರುವುದನ್ನೇ ಕೃಷಿ ಹೊಂಡ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದರು.

ಪ್ರತಿ ದಿನ ಅಷ್ಟೆಲ್ಲ ಅಗೆದರೂ ಏನೂ ಸಿಗುತ್ತಿಲ್ಲ. ದೂರು ನೀಡಿದವನು ಯಾರು ಎಂದು ಪೊಲೀಸರು ಮೊದಲು ತನಿಖೆ ಮಾಡಬೇಕಿತ್ತು. ಆ ವ್ಯಕ್ತಿ ಯಾರು? ಆತನ ಹಿನ್ನೆಲೆ ಏನು ಎಂಬುದನ್ನು ನೋಡಬೇಕಿತ್ತು. ಅದನ್ನು ಬಿಟ್ಟು ಲಕ್ಷಾಂತರ ರೂಪಾಯಿ ನಷ್ಟ ಮಾಡಲಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸುವುದಾದರೆ ನಾವೆಲ್ಲರೂ ಬೆಂಬಲ ನೀಡುತ್ತೇವೆ. ಆದರೆ ಆ ನೆಪದಲ್ಲಿ ಮಂಜುನಾಥ ಸ್ವಾಮಿಗೆ ಅಪಮಾನ ಮಾಡಲಾಗುತ್ತಿದೆ. ಈ ಹಿಂದೆ ತಿರುಪತಿಯನ್ನು ಮುಳುಗಿಸಲು ಮುಂದಾಗಿದ್ದರು. ನಂತರ ಶಬರಿಮಲೆ, ಶನಿಸಿಂಗಾಪುರ ಕ್ಷೇತ್ರಗಳನ್ನು ಹಾಳು ಮಾಡಲು ಯತ್ನಿಸಿದರು ಎಂದರು.

ಹಿಂದೂ ಧಾರ್ಮಿಕ ಕ್ಷೇತ್ರಗಳು ಸರಿಯಿಲ್ಲ. ಇವೆಲ್ಲವನ್ನೂ ಮುಗಿಸಿಬಿಟ್ಟರೆ ಧರ್ಮವನ್ನು ನಾಶ ಮಾಡಬಹುದು ಎಂದು ಇವರೆಲ್ಲ ತಿಳಿದಿದ್ದಾರೆ. ಕ್ಷೇತ್ರದ ಪಾವಿತ್ರ್ಯತೆಯನ್ನು ಹಾಳು ಮಾಡುವ ಅನೇಕರು ನಮ್ಮ ದೇಶದಲ್ಲಿದ್ದಾರೆ. ಮುಸುಕುಧಾರಿಯ ಹಿಂದಿರುವ ತಂಡವನ್ನು ಪೊಲೀಸರು ನೋಡಬೇಕು. ಸುಜಾತ ಭಟ್‌ ಎಂಬುವರು ಈಗ ಬಂದು ಮಗಳು ಅನನ್ಯ ಕಿಡ್ನಾಪ್‌ ಆಗಿದ್ದಾಳೆ ಎಂದು ದೂರು ನೀಡಿದ್ದಾರೆ. ಖಾಸಗಿ ಚಾನಲ್‌ನಲ್ಲಿ ಬಂದ ಮಾಹಿತಿ ಪ್ರಕಾರ, ಅವರ ಮನೆಯವರು ಆಕೆಗೆ ಮಗಳೇ ಇಲ್ಲ ಎಂದು ಹೇಳಿದ್ದರು. ಆಕೆಯ ಎಂಬಿಬಿಎಸ್‌ ವಿದ್ಯಾರ್ಥಿಯೇ ಅಲ್ಲ ಎಂದು ತಿಳಿದುಬಂದಿದೆ. ಪೊಲೀಸರಿಗೆ ಇಂತಹ ನಿರ್ದೇಶನವನ್ನು ಯಾರು ನೀಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X