ಸುಧಾಮೂರ್ತಿ ಅವರನ್ನು ಟೀಕಿಸುವುದು ನ್ಯಾಯಾಂಗ ನಿಂದನೆ : ಆರ್.ಅಶೋಕ್

ಬೆಂಗಳೂರು, ಅ.19: ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರನ್ನು ಬೃಹಸ್ಪತಿಗಳಾ ಎಂದು ಕೇಳುತ್ತಾರೆ. ಆದರೆ, ಇಷ್ಟ ಇದ್ದರೆ ಮಾತ್ರ ಮಾಹಿತಿ ನೀಡಿ ಎಂದು ಹೈಕೋರ್ಟ್ ಹೇಳಿದೆ. ಆದರೂ ಅವರನ್ನು ಟೀಕಿಸುವುದು ನ್ಯಾಯಾಂಗ ನಿಂದನೆಯಾಗಿದೆ ಎಂದರು.
ರಾಜ್ಯ ಸರಕಾರ ಆರೆಸ್ಸೆಸ್ ವಿರುದ್ಧ ಕೈಗೊಳ್ಳುವ ಕ್ರಮಗಳು ಮುಂದೆ ಕಾಂಗ್ರೆಸ್‍ಗೆ ತಿರುಗುಬಾಣವಾಗಲಿದೆ. ಪಥ ಸಂಚಲನದ ಅನುಮತಿಗೆ ಸಂಬಂಧಿಸಿದಂತೆ ಕೋರ್ಟ್ ಸರಕಾರಕ್ಕೆ ಛೀಮಾರಿ ಹಾಕಿದೆ. ಯಾವುದೇ ಸಂಘಟನೆಗಳ ಕಾರ್ಯಕ್ರಮಕ್ಕೆ ನಾವು ಎಂದೂ ಕಡಿವಾಣ ಹಾಕಿಲ್ಲ. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಬೇಕು ಎಂದು ಹೇಳಿದರು.
Next Story





