Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಗೇಂದ್ರ ರಾಜೀನಾಮೆ | ಜನಾಕ್ರೋಶದ ಮುಂದೆ...

ನಾಗೇಂದ್ರ ರಾಜೀನಾಮೆ | ಜನಾಕ್ರೋಶದ ಮುಂದೆ ಮಂಡಿಯೂರಿದ ಸರಕಾರ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ28 Aug 2026 8:09 PM IST
share
ನಾಗೇಂದ್ರ ರಾಜೀನಾಮೆ | ಜನಾಕ್ರೋಶದ ಮುಂದೆ ಮಂಡಿಯೂರಿದ ಸರಕಾರ : ಆರ್.ಅಶೋಕ್

ಬೆಂಗಳೂರು : ‘ಬಿಜೆಪಿಯಿಂದ ಪಾದಯಾತ್ರೆ ಘೋಷಣೆಗೆ ಬೆದರಿದ ಕಾಂಗ್ರೆಸ್, ನಾಗೇಂದ್ರ ರಾಜೀನಾಮೆ ಪಡೆದು ಮಾನ ಉಳಿಸಿಕೊಂಡಿದೆ. ಜನಾಕ್ರೋಶಕ್ಕೆ ಕೊನೆಗೂ ಕಾಂಗ್ರೆಸ್ ಸರಕಾರ ಮಂಡಿಯೂರಿದೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮಾತು ಮಾತಿಗೂ ಅಂಬೇಡ್ಕರರ ಹೆಸರು ಹೇಳಿಕೊಂಡು ದಲಿತರನ್ನು ತುಳಿದ ಕಾಂಗ್ರೆಸ್‍ಗೆ ದಲಿತರ ಆಕ್ರೋಶದ ಬಿಸಿ ತಟ್ಟಿದೆ. ಕರ್ನಾಟಕದ ರಾಜಕೀಯದಲ್ಲಿ ಭ್ರಷ್ಟರನ್ನು ಸಚಿವರಾಗಿಟ್ಟುಕೊಂಡು ಆಡಳಿತ ನಡೆಸಲು ಸಾಧ್ಯವೇ ಇಲ್ಲ ಎಂಬ ಸಂದೇಶ ರವಾನೆಯಾಗಿದೆ ಎಂದು ಹೇಳಿದರು.

ಇದು ಕೇವಲ ರಾಜೀನಾಮೆಯಲ್ಲ, ಸರಕಾರದ ಅಹಂಕಾರದ ಮೇಲೆ ಬಿದ್ದ ಬಲವಾದ ಹೊಡೆತ. ಇದು ಕೋಟ್ಯಂತರ ದಲಿತರಿಗೆ ಸಿಕ್ಕಿರುವ ದಿಗ್ವಿಜಯ. ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ಲೂಟಿ ಮಾಡಿದ ಆರೋಪದ ವಿರುದ್ಧ ಬಿಜೆಪಿ-ಜೆಡಿಎಸ್ ಸದನದ ಒಳಗೆ-ಹೊರಗೆ ನಿರಂತರವಾಗಿ ಹೋರಾಟ ಮಾಡಿದ್ದವು ಎಂದು ಅವರು ತಿಳಿಸಿದರು.

‘ನಾವು ಪ್ರಶ್ನೆ ಕೇಳಿದಾಗ ಸದನದಿಂದ ಪಲಾಯನ, ನಾವು ಉತ್ತರ ಕೇಳಿದಾಗ ಅಧಿವೇಶನ ಮೊಟಕು. ನಾವು ಸತ್ಯ ಬಯಲು ಮಾಡಿದಾಗ ಆರೋಪಿಗಳನ್ನು ರಕ್ಷಿಸುವ ಸರ್ಕಸ್. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಒಂದು ವಿಷಯ ಅರ್ಥ ಮಾಡಿಕೊಳ್ಳಬೇಕು. ಸದನ ಮುಂದೂಡಬಹುದು. ಚರ್ಚೆ ತಪ್ಪಿಸಿಕೊಳ್ಳಬಹುದು. ಸತ್ಯವನ್ನು ಮಾತ್ರ ಮುಚ್ಚಿಡಲು ಸಾಧ್ಯವಿಲ್ಲ’ ಎಂದು ಅವರು ಲೇವಡಿ ಮಾಡಿದರು.

ನಮ್ಮ ನಿರಂತರ ಹೋರಾಟ, ಜನಾಕ್ರೋಶ ಮತ್ತು ನಮ್ಮ ಪಾದಯಾತ್ರೆಯ ಘೋಷಣೆಯ ಬೆನ್ನಲ್ಲೇ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇದು ಭ್ರಷ್ಟರ ವಿರುದ್ಧ ನಮ್ಮ ಹೋರಾಟದ ಗೆಲುವು. ಇದು ದಲಿತರ ಹಣಕ್ಕೆ ನ್ಯಾಯ ಬೇಕೆಂಬ ಆಗ್ರಹಕ್ಕೆ ಸಿಕ್ಕ ಜಯ. ಆದರೆ, ಒಬ್ಬ ಸಚಿವ ರಾಜೀನಾಮೆ ಕೊಡಿಸಿದರೆ ದಲಿತರಿಗೆ ನ್ಯಾಯ ಸಿಕ್ಕಂತೆ ಆಗುವುದಿಲ್ಲ. ನಾಗೇಂದ್ರ ರಾಜೀನಾಮೆ ಕೊಟ್ಟ ಮಾತ್ರಕ್ಕೆ ಕಾಂಗ್ರೆಸ್ ಪಾಪದ ಕೊಡ ಖಾಲಿಯಾಗುವುದಿಲ್ಲ.

ಈ ಹಗರಣದ ಸೂತ್ರದಾರರು ಯಾರು?. ಯಾರ ಆದೇಶದ ಮೇರೆಗೆ ಹಣ ವರ್ಗಾವಣೆಯಾಯಿತು?. ಯಾರ ಕಚೇರಿಯಿಂದ ನಿರ್ದೇಶನಗಳು ಬಂದವು?. ಯಾರಿಗೆ ಈ ಲೂಟಿಯಲ್ಲಿ ಲಾಭವಾಯಿತು?. ಯಾರು ಆರೋಪಿಗಳನ್ನು ರಕ್ಷಿಸಿದರು?. ಪ್ರತಿಯೊಂದು ಪ್ರಶ್ನೆಗೂ ಉತ್ತರ ಬೇಕು. ದಲಿತರ ಹಣಕ್ಕೆ ಕೈಹಾಕಿದ, ಹಗರಣಕ್ಕೆ ಸಹಕರಿಸಿದ ಪ್ರತಿಯೊಬ್ಬರೂ, ಆರೋಪಿಗಳನ್ನು ರಕ್ಷಿಸಿದ ಪ್ರತಿಯೊಬ್ಬರೂ ಕಾನೂನಿನ ಮುಂದೆ ನಿಲ್ಲಲೇಬೇಕು ಎಂದು ಅವರು ಆಗ್ರಹಿಸಿದರು.

ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯ ತನಿಖೆಯ ಆರಂಭ. ಸರಕಾರದ ಮುಖವಾಡ ಕಳಚಿದೆ. ಈಗ ಸತ್ಯ ಹೊರಬರಬೇಕು, ಲೂಟಿಯ ಲೆಕ್ಕ ಹೊರಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಧಿಕಾರಿ ಪಿ.ಚಂದ್ರಶೇಖರನ್ ಆತ್ಮಕ್ಕೆ ಶಾಂತಿ ದೊರೆಯಬೇಕು. ಜನರ ಹಣಕ್ಕೆ ನ್ಯಾಯ ಸಿಗುವವರೆಗೂ, ಹಗರಣದ ಸತ್ಯ ಬಯಲಾಗುವವರೆಗೂ, ತಪ್ಪಿತಸ್ಥರು ಕಾನೂನಿನ ಮುಂದೆ ನಿಲ್ಲುವವರೆಗೂ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಇದು ಕೇವಲ ರಾಜೀನಾಮೆಯ ಗೆಲುವಲ್ಲ. ಇದು ಸತ್ಯದ ಗೆಲುವಿನ ಆರಂಭ’

-ಆರ್.ಅಶೋಕ್ ಪ್ರತಿಪಕ್ಷ ನಾಯಕ

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X