Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉದ್ಯಾನಗಳ ರಕ್ಷಣೆಗೆ ಅಭಿಯಾನ: ವಿಧೇಯಕ...

ಉದ್ಯಾನಗಳ ರಕ್ಷಣೆಗೆ ಅಭಿಯಾನ: ವಿಧೇಯಕ ಹಿಂಪಡೆಯಲು ಆರ್.ಅಶೋಕ್ ಒತ್ತಾಯ

"ಉದ್ಯಾನನಗರಿಯ ಉದ್ಯಾನಗಳನ್ನು ನಾಶ ಮಾಡಿದರೆ ದಿಲ್ಲಿಯಂತೆ ಮಾಲಿನ್ಯ ನಗರವಾಗುತ್ತದೆ"

ವಾರ್ತಾಭಾರತಿವಾರ್ತಾಭಾರತಿ2 Sept 2026 6:45 PM IST
share
ಉದ್ಯಾನಗಳ ರಕ್ಷಣೆಗೆ ಅಭಿಯಾನ: ವಿಧೇಯಕ ಹಿಂಪಡೆಯಲು ಆರ್.ಅಶೋಕ್ ಒತ್ತಾಯ



ಬೆಂಗಳೂರು : ರಿಯಲ್ ಎಸ್ಟೇಟ್ ಮಾಫಿಯಾದ ತಾಳಕ್ಕೆ ತಕ್ಕಂತೆ ಕುಣಿಯುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಯಾನಗಳ ಭೂಮಿ ಕಬಳಿಕೆಗೆ ‘ಸರಕಾರಿ ಉದ್ಯಾನವನಗಳ(ಸಂರಕ್ಷಣೆ) (ತಿದ್ದುಪಡಿ) ವಿಧೇಯಕ’ದ ಮೂಲಕ ಅವಕಾಶ ನೀಡಿದ್ದಾರೆ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆ.5 ಮತ್ತು 6ರಂದು ಪ್ರತಿಭಟನೆ, ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಹಾಗೂ ಪ್ರತಿಪಕ್ಷ ಸೇರಿದಂತೆ ಎಲ್ಲರೂ ಉದ್ಯಾನವನಗಳನ್ನು ರಕ್ಷಿಸಬೇಕು. ಆದರೆ, ಇದೀಗ ಉದ್ಯಾನವನಗಳ ಶೇ.5ರಷ್ಟು ಭೂಮಿ ಎಂದು ಹೇಳಿ ಮುಂದೆ ಅದನ್ನು ಶೇ.50ರಷ್ಟಕ್ಕೆ ಹೆಚ್ಚಿಸಬಹುದು. ಕೆಂಪೇಗೌಡರು ಕಟ್ಟಿದ ಉದ್ಯಾನನಗರಿಯ ಉದ್ಯಾನಗಳನ್ನು ನಾಶ ಮಾಡಿದರೆ ದಿಲ್ಲಿಯಂತೆ ಮಾಲಿನ್ಯ ನಗರವಾಗುತ್ತದೆ ಎಂದು ಎಚ್ಚರಿಸಿದರು.

ಈ ಹಿಂದೆ ಕಾಂಗ್ರೆಸ್ ಸರಕಾರ ಪಾರ್ಕ್, ಕ್ರೀಡಾಂಗಣದಲ್ಲಿ ಅನ್ಯ ಉದ್ದೇಶಕ್ಕಾಗಿ ಬಳಸಬಹುದು ಎಂದು ಕಾನೂನು ತಂದಿತ್ತು. ನಂತರ ಹೋರಾಟ ನಡೆದು ಅದನ್ನು ಹಿಂಪಡೆಯಲಾಯಿತು. ಇದೀಗ ಮತ್ತೆ ಅದೇ ಕಾನೂನು ಬರುತ್ತಿದೆ. ಸಿಎಂ ಈ ವಿಧೇಯಕವನ್ನು ವಾಪಸ್ ಪಡೆಯುವುದಿಲ್ಲ, ಚರ್ಚೆಗೆ ಅವಕಾಶ ನೀಡುತ್ತೇವೆ ಎಂದು ಸರಕಾರ ಹೇಳಿದೆ. ಚರ್ಚೆ ಬೇಕಿಲ್ಲ, ಮಸೂದೆ ಅನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಸುರಂಗ ರಸ್ತೆ ಯೋಜನೆಯಲ್ಲಿ ಪಾರ್ಕಿಂಗ್‌ ಅಗತ್ಯವಿಲ್ಲ. ಮಾಲ್ ನಿರ್ಮಿಸಲು ಲಾಲ್‍ಬಾಗ್ ಜಾಗವನ್ನು ಬಳಸಲು ನಿರ್ಧರಿಸಿದ್ದಾರೆ. ಯೋಜನೆ ಗುತ್ತಿಗೆ ಪಡೆದಿರುವ ಗೌತಮ್ ಅದಾನಿಯನ್ನು ಮನೆಗೆ ಕರೆಸಿ ತಿಂಡಿ ತಿನ್ನಿಸಿ ಕಳುಹಿಸಿದ್ದಾರೆ. ದಿಲ್ಲಿಯಲ್ಲಿ ರಾಹುಲ್ ಗಾಂಧಿ ಅದೇ ಅದಾನಿಯನ್ನು ಟೀಕೆ ಮಾಡುತ್ತಾರೆ. ಉದ್ಯಾನವನಗಳ ರಕ್ಷಣೆ ಮತ್ತು ಸುರಂಗ ರಸ್ತೆ ಯೋಜನೆ ವಿರೋಧಿಸಿ ಸೆ.5 ಮತ್ತು 6ರಂದು ಪ್ರತಿಭಟನೆ, ಸಹಿ ಸಂಗ್ರಹ ಅಭಿಯಾನ ನಡೆಸಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸಚಿವರ ರಾಜೀನಾಮೆ: ಕೆಆರ್‌ಐಡಿಎಲ್‍ನಲ್ಲಿ ಶೇ.7ರಷ್ಟು ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದೀಗ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರೇ ಮಾಡಿರುವ ಆರೋಪ ಪ್ರಮುಖ ಸಾಕ್ಷ್ಯ ಎಂದರು.

ಈಗಾಗಲೇ ಒಬ್ಬ ಸಚಿವ ಭ್ರಷ್ಟಾಚಾರದಿಂದಾಗಿ ರಾಜೀನಾಮೆ ನೀಡಿದ್ದಾರೆ. ಆದರೂ ಇಬ್ಬರು ಸಚಿವರಿಗೆ ಭಯವಿಲ್ಲ. ಶೇ.7ರಷ್ಟು ಕಮಿಷನ್ ಹಣ ರಾಹುಲ್ ಗಾಂಧಿಗೂ ತಲುಪುತ್ತದೆ. ಕರ್ನಾಟಕ ಎಂದರೆ ಇತರೆ ರಾಜ್ಯಗಳಿಗೆ ಮಾದರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಂದರೆ ಶೇ.7ರಷ್ಟು ಕಮಿಶನ್ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಅಶೋಕ್ ಟೀಕಿಸಿದರು.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X