ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಗತ್ಯ: ಆರ್.ಅಶೋಕ್

ಬೆಂಗಳೂರು : ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಇರಬೇಕೆಂಬುದು ಬಹುತೇಕ ಮುಖಂಡರ ಅಭಿಪ್ರಾಯವಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ರವಿವಾರ ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಇರಬೇಕೆಂಬ ಅಭಿಪ್ರಾಯ ಹಲವರಲ್ಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಒಂದೊಂದು ರೀತಿಯ ರಾಜಕೀಯ ವಾತಾವರಣವಿದೆ. ಹೀಗಾಗಿ ಸಮನ್ವಯ ಸಮಿತಿ ಸಭೆ ನಡೆಸಿ, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಉಪಚುನಾವಣೆ ಟಿಕೆಟ್ನ್ನು ಬಿಜೆಪಿ ಅಭ್ಯರ್ಥಿಗೆ ನೀಡಲು ಮನವಿ ಮಾಡಲಾಗುತ್ತಿದೆ. ಅಂತಿಮವಾಗಿ ಕೇಂದ್ರದ ನಾಯಕರು ಕೈಗೊಳ್ಳುವ ನಿರ್ಣಯಕ್ಕೆ ಬದ್ಧ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜತೆ ಚರ್ಚಿಸಲಾಗುವುದು ಎಂದರು.
Next Story




