Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ...

ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್. ಅಶೋಕ್

ವಾರ್ತಾಭಾರತಿವಾರ್ತಾಭಾರತಿ27 Nov 2023 6:21 PM IST
share
ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್. ಅಶೋಕ್

ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡಬೇಕೆಂದು ಕೋರಿ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯಲಾಗುವುದು ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ ಎಂದು ಟೀಕಿಸಿದರು.

ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ದೂರಿದ ಅವರು, ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು.

ಈ ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್‍ಡಿಆರ್‍ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ದಾಡಿ. ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟ ಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು, ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ದೂರಿದರು.

‘ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ, ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ. ಬೆಳಗಾವಿ ಅಧಿವೇಶನದಲ್ಲಿ ಇವರು ಮಾಡಿರುವ ಖರ್ಚು-ವೆಚ್ಚ ಮತ್ತು ಹಣಕಾಸಿನ ಸ್ಥಿತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡಬೇಕೆಂದು ಸರಕಾರವನ್ನು ಆಗ್ರಹಿಸಲಾಗುವುದು ಎಂದು ಅಶೋಕ್ ತಿಳಿಸಿದರು.

ಬೋಗಸ್ ದರ್ಶನ: ಮುಖ್ಯಮಂತ್ರಿ ಜನತಾದರ್ಶನ ಕಾರ್ಯಕ್ರಮ ಬೋಗಸ್ ದರ್ಶನ. ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಅಶೋಕ್ ಮಾಡಿದರು.

ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ. ಏಕೆಂದರೆ ಆಡಳಿತ ಸಂಪೂರ್ಣ ನೆಲಕಚ್ಚಿದ್ದು ಅಧಿಕಾರಶಾಹಿ ಜನರ ಶೋಷಣೆಯಲ್ಲಿ ನಿರತವಾಗಿದೆ. ಇದನ್ನು ಗಮನಿಸಿ ಸರಿಪಡಿಸಬೇಕಿದ್ದ ಸಚಿವರು ತೆಲಂಗಾಣ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಕ್ರಾಂತಿ ಆಗಿದೆ ಎಂದು ಬುರುಡೆ ಭಾಷಣ ಬಿಗಿಯುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಡಿದಿರುವ ಬರಗಾಲ ನಿವಾರಣೆಗಾಗಿ ಸಿದ್ದರಾಮಯ್ಯ ಎಲ್ಲ ಸಚಿವರನ್ನು ಅಲ್ಲಿಗೆ ನಿಯೋಜಿಸಿದ್ದಾರೆ. ಇಲ್ಲಿ ಜನ ತತ್ತರಿಸುತ್ತಿದ್ದರೂ ಕೇಳುವವರು ದಿಕ್ಕಿಲ್ಲ ಎಂದು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X