Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿಕ್ಷಕರ ವಿಶ್ವಾಸಕ್ಕೆ ಸಂದ ಜಯ, ಎನ್‍ಡಿಎ...

ಶಿಕ್ಷಕರ ವಿಶ್ವಾಸಕ್ಕೆ ಸಂದ ಜಯ, ಎನ್‍ಡಿಎ ಮೈತ್ರಿಕೂಟದ ಒಗ್ಗಟ್ಟಿನ ವಿಜಯ : ಆರ್.ಅಶೋಕ್

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‍ಡಿಎ ಅಭ್ಯರ್ಥಿ ಗೆಲುವು

ವಾರ್ತಾಭಾರತಿವಾರ್ತಾಭಾರತಿ27 Oct 2026 9:07 PM IST
share
ಶಿಕ್ಷಕರ ವಿಶ್ವಾಸಕ್ಕೆ ಸಂದ ಜಯ, ಎನ್‍ಡಿಎ ಮೈತ್ರಿಕೂಟದ ಒಗ್ಗಟ್ಟಿನ ವಿಜಯ : ಆರ್.ಅಶೋಕ್

ಬೆಂಗಳೂರು : 2026ರ ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‍ಡಿಎ ಮೈತ್ರಿಕೂಟದ (ಬಿಜೆಪಿ-ಜೆಡಿಎಸ್) ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿರುವ ಎ.ಪಿ.ರಂಗನಾಥ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಈ ಗೆಲುವು ಕೇವಲ ಒಬ್ಬ ಅಭ್ಯರ್ಥಿಯ ವಿಜಯವಲ್ಲ, ಶಿಕ್ಷಕರ ಹಿತಾಸಕ್ತಿಗಳ ಪರವಾಗಿ ನಿಂತ ಎನ್‍ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟಿತ ಹೋರಾಟ ಹಾಗೂ ಪ್ರಜ್ಞಾವಂತ ಮತದಾರರ ವಿವೇಚನಾಪೂರ್ಣ ನಿರ್ಧಾರಕ್ಕೆ ಸಂದ ಜಯವಾಗಿದೆ ಎಂದು ಹೇಳಿದ್ದಾರೆ.

ಎ.ಪಿ. ರಂಗನಾಥ್ ಅವರ ಮೇಲೆ ವಿಶ್ವಾಸವಿಟ್ಟು ತಮ್ಮ ಅಮೂಲ್ಯ ಮತಗಳ ಮೂಲಕ ಬೆಂಬಲ ನೀಡಿದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಮಸ್ತ ಗೌರವಾನ್ವಿತ ಶಿಕ್ಷಕ ಹಾಗೂ ಅಧ್ಯಾಪಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ಐತಿಹಾಸಿಕ ಗೆಲುವಿಗಾಗಿ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಎಲ್ಲ ಹಿರಿಯ ನಾಯಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳು ಮತ್ತು ಕೃತಜ್ಞತೆಗಳು ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ವೈಫಲ್ಯ, ಭ್ರಷ್ಟಾ ಚಾರ ಮತ್ತು ಜನವಿರೋಧಿ ನೀತಿಗಳಿಂದ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಈ ಫಲಿತಾಂಶ ಮತ್ತೊಂದು ಸ್ಪಷ್ಟ ಎಚ್ಚರಿಕೆಯಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತಕ್ಕೆ ಮತದಾರರು ನೀಡುತ್ತಿರುವ ಉತ್ತರದ ಪ್ರತಿಬಿಂಬವೇ ಈ ಗೆಲುವು. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಆಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಕ್ಕೆ ಇದು ಮುನ್ನುಡಿಯಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸದನದಲ್ಲಿ ಸಮರ್ಥ ಧ್ವನಿಯಾಗಿ, ಅವರ ನ್ಯಾಯಯುತ ಬೇಡಿಕೆಗಳು ಮತ್ತು ಹಕ್ಕುಗಳ ರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ರಾಜ್ಯದ ಶಿಕ್ಷಣ ಕ್ಷೇತ್ರದ ಗುಣಮಟ್ಟ ಮತ್ತು ಸರ್ವತೋಮುಖ ಪ್ರಗತಿಗೆ ಎ.ಪಿ. ರಂಗನಾಥ್ ಮಹತ್ವದ ಕೊಡುಗೆ ನೀಡಲಿ ಎಂದು ಅಶೋಕ್ ಹಾರೈಸಿದ್ದಾರೆ.

ಶಿಕ್ಷಕರ ವಿಶ್ವಾಸಕ್ಕೆ ಸಂದ ಜಯ, ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟಿನ ವಿಜಯ!

2026ರ ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ (ಬಿಜೆಪಿ–ಜೆಡಿಎಸ್) ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿರುವ ಶ್ರೀ ಎ.ಪಿ. ರಂಗನಾಥ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಈ ಗೆಲುವು ಕೇವಲ ಒಬ್ಬ ಅಭ್ಯರ್ಥಿಯ ವಿಜಯವಲ್ಲ; ಶಿಕ್ಷಕರ ಹಿತಾಸಕ್ತಿಗಳ ಪರವಾಗಿ ನಿಂತ ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟಿತ ಹೋರಾಟ ಹಾಗೂ ಪ್ರಜ್ಞಾವಂತ ಮತದಾರರ ವಿವೇಚನಾಪೂರ್ಣ ನಿರ್ಧಾರಕ್ಕೆ ಸಂದ ಜಯವಾಗಿದೆ. ಶ್ರೀ ಎ.ಪಿ. ರಂಗನಾಥ್ ಅವರ ಮೇಲೆ ವಿಶ್ವಾಸವಿಟ್ಟು ತಮ್ಮ ಅಮೂಲ್ಯ ಮತಗಳ ಮೂಲಕ ಬೆಂಬಲ ನೀಡಿದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಮಸ್ತ ಗೌರವಾನ್ವಿತ ಶಿಕ್ಷಕ ಹಾಗೂ ಅಧ್ಯಾಪಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಐತಿಹಾಸಿಕ ಗೆಲುವಿಗಾಗಿ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಹಿರಿಯ ನಾಯಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳಿಗೂ ವಿಶೇಷ ಅಭಿನಂದನೆಗಳು ಮತ್ತು ಕೃತಜ್ಞತೆಗಳು.

ರಾಜ್ಯದಲ್ಲಿ ಆಡಳಿತ ವೈಫಲ್ಯ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳಿಂದ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಈ ಫಲಿತಾಂಶ ಮತ್ತೊಂದು ಸ್ಪಷ್ಟ ಎಚ್ಚರಿಕೆಯಾಗಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಮತದಾರರು ನೀಡುತ್ತಿರುವ ಉತ್ತರದ ಪ್ರತಿಬಿಂಬವೇ ಈ ಗೆಲುವು. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಆಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಕ್ಕೆ ಇದು ಮುನ್ನುಡಿಯಾಗಿದೆ.

ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸದನದಲ್ಲಿ ಸಮರ್ಥ ಧ್ವನಿಯಾಗಿ, ಅವರ ನ್ಯಾಯಯುತ ಬೇಡಿಕೆಗಳು ಮತ್ತು ಹಕ್ಕುಗಳ ರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ರಾಜ್ಯದ ಶಿಕ್ಷಣ ಕ್ಷೇತ್ರದ ಗುಣಮಟ್ಟ ಮತ್ತು ಸರ್ವತೋಮುಖ ಪ್ರಗತಿಗೆ ಶ್ರೀ ಎ.ಪಿ. ರಂಗನಾಥ್ ಅವರು ಮಹತ್ವದ ಕೊಡುಗೆ ನೀಡಲಿ ಎಂದು ಹಾರೈಸುತ್ತೇನೆ.

ಈ ಗೆಲುವು ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಕಾರ್ಯಕರ್ತರ ಪರಿಶ್ರಮ ಮತ್ತು ಶಿಕ್ಷಕ ಸಮುದಾಯದ ವಿಶ್ವಾಸಕ್ಕೆ ಸಂದ ಜಯ. ಈ ವಿಜಯಕ್ಕಾಗಿ ಶ್ರಮಿಸಿದ ಹಾಗೂ ಬೆಂಬಲಿಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಹೃತ್ಪೂರ್ವಕ ಧನ್ಯವಾದಗಳು!

#APRanganath #NDA #BJP #JDS #BengaluruTeachersConstituency

— R. Ashoka (@RAshokaBJP) October 27, 2026

Tags

R. Ashoka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X