ಖಾತೆ ಹಂಚಿಕೆ ಬಗ್ಗೆ ಅಸಮಾಧಾನ | ರಾಹುಲ್ ಗಾಂಧಿ ಭೇಟಿ ಬಳಿಕ ʼಐ ಆ್ಯಮ್ ಹ್ಯಾಪಿʼ ಎಂದ ಸಚಿವ ಕೆ.ಎಚ್.ಮುನಿಯಪ್ಪ

screengrab : x/@ANI
ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮಧ್ಯೆ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಅವರೂ ಕೂಡ ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಖುದ್ದು ರಾಹುಲ್ ಗಾಂಧಿ ಬಳಿಯೇ ಮುನಿಯಪ್ಪ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸಮಾಧಾನಗೊಂಡಿರುವ ಮುನಿಯಪ್ಪ, ʼಐ ಆ್ಯಮ್ ಹ್ಯಾಪಿʼ ಎಂದಿದ್ದಾರೆ.
ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ ಅವರು, ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದು, ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಐ ಆ್ಯಮ್ ಹ್ಯಾಪಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
#WATCH | Bengaluru: Amid reports of him being miffed over his portfolio allocation, Karnataka Minister K.H. Muniyappa says, "I am happy. No problem...We met Rahul Gandhi, Randeep Surjewala, KC Venugopal. They will sort it. No problem, Rahul Gandhi has said he will sort it out." pic.twitter.com/BzL4GVSNae
— ANI (@ANI) June 5, 2026






