ರಾಜ್ಯದಲ್ಲಿ ಆರು ದಿನಗಳ ಕಾಲ ಮಳೆ ಪ್ರಮಾಣ ಕಡಿಮೆ : ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಇಂದಿನಿಂದ(ಜೂ.2) ಜೂ.8ರವರೆಗೆ ರಾಜ್ಯದಲ್ಲಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳು ಹೊರತುಪಡಿಸಿ ಉಳಿದ ಜಿಲ್ಲೆಯಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಆರು ದಿನಗಳ ಕಾಲ ಕರವಾಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಜೂ.5ರಂದು ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.





