Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಳೆ ಹಾನಿ | ಜುಲೈ 31ರಂದು ದಕ್ಷಿಣ...

ಮಳೆ ಹಾನಿ | ಜುಲೈ 31ರಂದು ದಕ್ಷಿಣ ಕನ್ನಡ ಸೇರಿ ವಿವಿಧ ಜಿಲ್ಲೆಗಳಿಗೆ ಭೇಟಿ: ಸಿಎಂ ಸಿದ್ದರಾಮಯ್ಯ

► ''ಉತ್ತಮ ಮಳೆಯಿಂದ ರಾಜ್ಯದಲ್ಲಿ ಶೇ 100ರಷ್ಟು ಬಿತ್ತನೆಯಾಗುವ ನಿರೀಕ್ಷೆ''

ವಾರ್ತಾಭಾರತಿವಾರ್ತಾಭಾರತಿ26 July 2023 1:55 PM IST
share
ಮಳೆ ಹಾನಿ |  ಜುಲೈ 31ರಂದು ದಕ್ಷಿಣ ಕನ್ನಡ ಸೇರಿ ವಿವಿಧ ಜಿಲ್ಲೆಗಳಿಗೆ ಭೇಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದರು.

ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ: ಪರಿಶೀಲನೆ

ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

'ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ'

ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು.

ಶಾಸಕರ ಹೆಸರಿನಲ್ಲಿ ನಕಲಿ ಪತ್ರ

ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯ ಮಂತ್ರಿಗಳಿಗೆ ಬರೆದಿದ್ದಾಈ ಎನ್ನಲಾದ ಪತ್ರವನ್ನು ಶಾಸಕ ಬಿ.ಆರ್.ಪಾಟೀಲ್ ಅವರೇ ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂಥ ಮಂತ್ರಿ ಎಂದು ಹೆಸರಿಸಿಲ್ಲ ಎಂದರು.

'ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ'

ಕಾರ್ಗಿಲ್ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ತ್ಯಾಗ, ಬಲಿದಾನ ಮಾಡಿದ ಎಲ್ಲರ ಆತ್ಮಕ್ಕೆ ಶಾಂತಿ ಕೋರಿ ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ ನೀಡುವಂಥದ್ದು ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X