ರಾಜ್ಯದಲ್ಲಿ ಜೂ.3ರವರೆಗೆ ಮಳೆ ಸಾಧ್ಯತೆ, ಹಲವೆಡೆ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ರಾಜ್ಯದಲ್ಲಿ ಜೂ.3ರವರೆಗೂ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಹಲವೆಡೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 27 ಮತ್ತು 28ರಂದು ಭಾರೀ ಮಳೆ ಸಾಧ್ಯತೆಯಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 27ರಂದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 50-60 ಕಿಮೀ ತಲುಪುವ ಸಾದ್ಯತೆಯಿದ್ದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದೆ.
ಮೇ 28 ರಿಂದ ಜೂ.3ರವರೆಗೆ ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇನ್ನು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.




