Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತ ಸಾಂತ್ವನ ಯಾತ್ರೆ | ಜೆಡಿಎಸ್...

ರೈತ ಸಾಂತ್ವನ ಯಾತ್ರೆ | ಜೆಡಿಎಸ್ ನಾಯಕರಿಗೆ ಮಹತ್ವದ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Nov 2023 12:12 PM IST
share
ರೈತ ಸಾಂತ್ವನ ಯಾತ್ರೆ | ಜೆಡಿಎಸ್ ನಾಯಕರಿಗೆ ಮಹತ್ವದ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್ ನಾಯಕರ ಬರ ಅಧ್ಯನಯನ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ''ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ'' ಎಂದು ಹೇಳಿದ್ದಾರೆ.

''ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ'' ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಲಹೆ

ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ''ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ'' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

''ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ'' ಎಂದಿದ್ದಾರೆ.

''ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

''ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಎಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು'' ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X