Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ...

ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಆ.27 ರಂದು ರಾಜ್ಯ ಭವನ ಚಲೋ

ವಾರ್ತಾಭಾರತಿವಾರ್ತಾಭಾರತಿ24 Aug 2024 2:47 PM IST
share
ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಆ.27 ರಂದು ರಾಜ್ಯ ಭವನ ಚಲೋ

ಕಲಬುರಗಿ: ಕರ್ನಾಟಕದ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಪೂಡಲ್‌ವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಅನಂತ ನಾಯಕ್ ಅವರು ಆರೋಪಿಸಿದ್ದಾರೆ .

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರುವುದಷ್ಟೆ ಅಲ್ಲ ತೀವು ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ- ಷಡ್ಯಂತ್ರಗಳ ಭಾಗವಾಗಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ದುಷ್ಟರು, ಭ್ರಷ್ಟರೂ ಆದ ಬಿಜೆಪಿ-ಜೆಡಿಎಸ್ ಪಕ್ಷಗಳ ಹಿತಾಸಕ್ತಿಗೆ ಅಡವಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಲೋಕಾಯುಕ್ತ, ಎಸ್‌ಐಟಿ ಮುಂತಾದ ತನಿಖಾ ಸಂಸ್ಥೆಗಳೂ ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಪ್ರಮುಖ ಕುಮಾರಸ್ವಾಮಿಯವರ ಗಣಿ ಹಗರಣ, ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ರೆಡ್ಡಿಯವರ ಭೀಕರ ಆಸ್ತಿ ಗಳಿಕೆ, ನಿರಾಣಿಯವರ ಭ್ರಷ್ಟಾಚಾರಗಳ ಕುರಿತು ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡಿ ಎಂದು ರಾಜಭವನಕ್ಕೆ ಕೋರಿಕೆ ಸಲ್ಲಿಸಿ ವರ್ಷಗಳಾದರೂ ಈ ರಾಜ್ಯಪಾಲರು ಈ ಕೋರಿಕೆಗಳನ್ನು ಕಸದ ಬುಟ್ಟಿಗೆ ಎಸೆದು ಪಕ್ಷಪಾತ ಮಾಡಿದ್ದಾರೆ. ಇದುವರೆಗೆ ಒಬ್ಬರ ಮೇಲೂ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ದೂರಿದರು.

ಆದರೆ ಬ್ಲಾಕ್‌ ಮೇಲರುಗಳು, ಕ್ರಿಮಿನಲ್ ಕೇಸುಗಳು ಬಾಕಿ ಇರುವ ಆರೋಪಿಗಳು ಕೊಟ್ಟ ದೂರು-ಅರ್ಜಿಗಳನ್ನು ಸರಿಯಾಗಿ ಪರಿಶೀಲನೆ ಕೂಡ ಮಾಡದೆ ದೂರರ್ಜಿ ಸ್ವೀಕರಿಸಿದ ದಿನವೇ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಗಳಿಗೆ ಕಾರಣ ಕೇಳುವ ನೋಟೀಸು ನೀಡಿರುತ್ತಾರೆ. ದೂರದಾರರ ಅರ್ಜಿ ಬರೀ ಸುಳ್ಳುಗಳಿಂದ ಕೂಡಿದೆ. ರಾಜ್ಯಪಾಲರು ನೀಡಿರುವ ನೋಟಿಸ್ ದೋಷಪೂರಿತ ಎಂದು ಇಡೀ ಸಚಿವ ಸಂಪುಟ ಚರ್ಚೆ ಮಾಡಿ ನೋಟೀಸನ್ನು ಕೂಡಲೆ ವಿತ್‌ ಡ್ರಾ ಮಾಡುವಂತೆ ನಿರ್ಣಯ ಮಾಡಿ ರಾಜಭವನಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ಸಹ ದೀರ್ಘವಾದ ಪ್ರತಿಕ್ರಿಯೆಯನ್ನು ಕಳುಹಿಸಿ ಕೊಟ್ಟಿದ್ದಾರೆ. ಇದ್ಯಾವುದನ್ನೂ ಪರಿಗಣಿಸದ ಈ ರಾಜ್ಯಪಾಲರು ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರಿಗೆ ಕಿರುಕುಳ ನೀಡಬೇಕೆಂದು ತೀರ್ಮಾನಿಸಿದ್ದಾರೆ ಎಂದರು.

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮುಡಾ ವಿಚಾರದಲ್ಲಿ ಒಂದು ಸೂಜಿಮೊನೆಯಷ್ಟೂ ತಪ್ಪು ಮಾಡಿಲ್ಲವೆಂದು ಇಡೀ ರಾಜ್ಯದ ಜನ ಹೇಳುತ್ತಿದ್ದಾರೆ ಹಾಗು ಸರ್ಕಾರಿ ದಾಖಲೆಗಳೂ ಹೇಳುತ್ತಿವೆ. ಆದರೆ ರಾಜಕೀಯ ದುರುದ್ದೇಶದಿಂದ ಬಿಜೆಪಿ-ಜೆಡಿಎಸ್‌ಗಳು ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುತ್ತಲೇ ಹೊರಟಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಪ್ರಕರಣದ ವಿಚಾರಣೆಯಾಗಿ ಹೈ ಕೋರ್ಟಿನ ನ್ಯಾಯಾಧೀಶರು, ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರಾ? ಯಾವುದಾದರೂ ದಾಖಲೆಗಳು ಇವೆಯಾ? ಎಂದು ಕೇಳಿದಾಗ ವಿರೋಧಿಗಳ ಬಳಿ ಉತ್ತರವೇ ಇರಲಿಲ್ಲ. ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ತೀರ್ಪಿನಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್‌ಗೆ ಅನುಮತಿಯು "Impugned sanction" ಎಂದು ನಮೂದಿಸಲಾಗಿದೆ. ಅಷ್ಟರ ಮಟ್ಟಿಗೆ ರಾಜ್ಯಪಾಲರಿಗೆ ಮುಖಭಂಗವಾಗಿದೆ ಅಲ್ಲವೇ?

ಬಿಜೆಪಿ-ಜೆಡಿಎಸ್ ಮತ್ತು ಕೋಮುವಾದಿ, ಜಾತಿವಾದಿ ದುರುಳರೆಲ್ಲಾ ಸೇರಿಕೊಂಡು ಶೋಷಿತ ಸಮುದಾಯಗಳ ಚೈತನ್ಯವನ್ನು ತುಳಿದು ಹಾಕಬೇಕೆಂದು ನಿರ್ಧಾರ ಮಾಡಿವೆ. ಇವರು ಬಡವರ ಪರ ಗ್ಯಾರಂಟಿ ಯೋಜನೆಗಳ ವಿರುದ್ಧ ಇದ್ದಾರೆ. ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿ ಸೋತು ಹಿಂಬಾಗಿಲ ಮೂಲಕ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ. ಅದರ ಭಾಗವಾಗಿಯೆ ನಮ್ಮ ಮುಖ್ಯಮಂತ್ರಿಗಳ ಮೇಲೆ ದಾಳಿ ಪ್ರಾರಂಭಿಸಿದ್ದಾರೆ.

ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಈ ತಕ್ಷಣವೇ ನಿಲ್ಲಿಸಬೇಕು. ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೆ ವಾಪಸ್ಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯ ರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆಯನ್ನು ಕಾಪಾಡಬೇಕೆಂದು ಆಗ್ರಹಿಸಿ ದಿನಾಂಕ:27-08-2024, ಬೆಳಿಗ್ಗೆ 11:00 ಗಂಟೆಗೆ ರಾಜ ಭವನ ಚಲೋ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ನಾಡಿನ ಪ್ರಜ್ಞಾವಂತರು, ಪ್ರಗತಿಪರರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಬಂಧುಗಳು, ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಮಹಾಂತೇಶ ಕೌಲಗಿ, ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಸುನೀಲ ಮಾರುತಿ ಮಾನಪಡೆ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಆದರ್ಶ ಯಲ್ಲಪ್ಪ, ಮಾನವ ಬಂಧುತ್ವ ವೇದಿಕೆ ಕಲಬುರಗಿ ಜಿಲ್ಲಾ ಅಧ್ಯಕ್ಷ ನಾಗೇಂದ್ರ ಜವಳಿ, ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕಲಬುರಗಿ ಜಿಲ್ಲಾ ಸಂಚಾಲಕ ಅರ್ಜುನ ಗೊಬ್ಬುರ, ಅಲೆಮಾರಿ ಸಂಘಟನೆಗಳ ಒಕ್ಕೂಟದ ಬಿ. ಹೆಚ್ ಮಂಜುನಾಥ್, ವಿದ್ಯಾರ್ಥಿ ಬಂಧುತ್ವ ವೇದಿಕೆ ಕಲಬುರಗಿ ಇದರ ದಿನೇಶ ದೊಡ್ಡಮನಿ, ಪರಶ್ಶಿಷ್ಟ ಪಂಗಡ ಮುಖಂಡ ಶಿವರಾಜ ಸುಬೇದಾರ್, ಅಲ್ಪ ಸಂಖ್ಯಾತ ಮುಖಂಡ ಮಹಬೂಬ್ ಶಾಹ್ ದರವೇಶಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X