Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರಿಗೆ ಸಿಬ್ಬಂದಿಗಳ ಅವಲಂಬಿತರ ಆರ್ಥಿಕ...

ಸಾರಿಗೆ ಸಿಬ್ಬಂದಿಗಳ ಅವಲಂಬಿತರ ಆರ್ಥಿಕ ಭದ್ರೆತೆಗಾಗಿ ‘ಸಾರಿಗೆ ಸುರಕ್ಷಾ’ ಯೋಜನೆ : ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ26 April 2025 6:32 PM IST
share
ಸಾರಿಗೆ ಸಿಬ್ಬಂದಿಗಳ ಅವಲಂಬಿತರ ಆರ್ಥಿಕ ಭದ್ರೆತೆಗಾಗಿ ‘ಸಾರಿಗೆ ಸುರಕ್ಷಾ’ ಯೋಜನೆ : ರಾಮಲಿಂಗಾರೆಡ್ಡಿ

ಬೆಂಗಳೂರು : ಸಾರಿಗೆ ಸಿಬ್ಬಂದಿ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಉದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶನಿವಾರ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ, ನಿಗಮದ ವಿವಿಧ ಪರಿಹಾರ ಯೋಜನೆಯಡಿ ಸಿಬ್ಬಂದಿ ಹಾಗೂ ಅವಲಂಭಿತರಿಗೆ ಪರಿಹಾರ ಮೊತ್ತದ ಚೆಕ್ ವಿತರಿಸಿ ಮಾತನಾಡಿದ ಅವರು, ಸಾರಿಗೆ ಸಿಬ್ಬಂದಿ ಹಗಲು ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಉನ್ನತ ಸ್ಥಾನದಲ್ಲಿದೆ. ಮೃತ ಸಿಬ್ಬಂದಿ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1,000 ಉದ್ಯೋಗ ನೀಡಿರುವುದಾಗಿ ತಿಳಿಸಿದರು.

ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡಬಾರದು. ಹಣವಿದ್ದರೆ ಎಲ್ಲರು ನೆಂಟರೆ ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ಕೆಎಸ್ ಆರ್‌ಟಿಸಿ ಆರೋಗ್ಯ ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ರಾಜ್ಯಾದಾದ್ಯಂತ 300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದ್ದು, ಈವರೆಗೂ 56,000ಕ್ಕೂ ಹೆಚ್ಚು ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿರುವುದಾಗಿ ಮಾಹಿತಿ ನೀಡಿದರು.

ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ರೂ., ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ.ದಂತೆ ಇಬ್ಬರಿಗೆ ರೂ.2 ಕೋಟಿ ಪರಿಹಾರ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿ ಅವಲಂಬಿತರಿಗೆ ತಲಾ ರೂ.10 ಲಕ್ಷ ರೂ. ದಂತೆ ರೂ.3.10 ಕೋಟಿ ರೂ. ಪರಿಹಾರವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಮುಹಮ್ಮದ್ ರಿಝ್ವಾನ್ ನವಾಬ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್.ವಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್, ಡಾ.ನಂದಿನಿದೇವಿ ಮತ್ತಿತರರು ಉಪಸ್ಥಿತರಿದ್ದರು.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ: ‘ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವೊಂದುವ ನೌಕರರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ 3 ಲಕ್ಷ ರೂ.ಗಳನ್ನು ನವೆಂಬರ್ 2023 ರಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಇದುವರೆಗೂ 94 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರದ ಚೆಕ್‍ನ್ನು ಇಂದು ವಿತರಿಸಲಾಯಿತು. ಈವರೆಗೂ 125 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು 12.50 ಕೋಟಿ ರೂ.ಗಳ ಪರಿಹಾರ ನೀಡಲಾಗಿದೆ.

-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X