ಅಜಾಗರೂಕತೆಯಿಂದ ವಾಹನ ಚಾಲನೆ | ಚಾಲಕರ ವಿರುದ್ಧ ಕಠಿಣ ಕ್ರಮ : ರಾಮಲಿಂಗಾ ರೆಡ್ಡಿ ಎಚ್ಚರಿಕೆ

ರಾಮಲಿಂಗಾ ರೆಡ್ಡಿ
ಬೆಂಗಳೂರು : ಚಾಲಕರು ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿ ಸಾರ್ವಜನಿಕರ ಸಾವು ನೋವಿಗೆ ಕಾರಣವಾದರೆ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ರವಿವಾರ ಪ್ರಕಟನೆ ಹೊರಡಿಸಿರುವ ಅವರು, ಚಾಲಕರು ಜವಾಬ್ದಾರಿಯಿಂದ, ಜಾಗರೂಕತೆಯಿಂದ ಚಾಲನೆ ಮಾಡಬೇಕು. ಅತೀ ವೇಗ, ನಿರ್ಲಕ್ಷ್ಯದ ಚಾಲನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಾರಿಗೆ ಸಂಸ್ಥೆಗಳಲ್ಲಿ ಶಿಸ್ತು ಕಾಪಾಡಬೇಕು. ಕಠಿಣ ಕ್ರಮದ ಭಯವಿಲ್ಲದೆ ಅಜಾಗರೂಕತೆ ಅಲಕ್ಷ್ಯ ವಹಿಸಿ ಪ್ರಯಾಣಿಕರ ಸಾವು ನೋವಿಗೆ ಕಾರಣರಾಗುವ ಸಿಬ್ಬಂದಿಯನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.
Next Story





