ಸಣ್ಣ ವ್ಯಾಪಾರಿಗಳಿಗೆ ನೋಟಿಸ್ | ಜಿಎಸ್ಟಿ ಕೌನ್ಸಿಲ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ರಾಜ್ಯ ಸರಕಾರ ಹೊಣೆಯಲ್ಲ: ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿ
ಬೆಂಗಳೂರು : ಜಿಎಸ್ಟಿ ಕೌನ್ಸಿಲ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ರಾಜ್ಯ ಸರಕಾರ ನೇರ ಹೊಣೆಯಲ್ಲ. ತಮ್ಮ ಕುತಂತ್ರ ಮತ್ತು ಆರೋಪಗಳು ಫಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಸೋಮವಾರ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ನೋಟೀಸ್ ನೀಡಲಾಗುತ್ತಿದೆ. ಅದಕ್ಕೆ ರಾಜ್ಯ ಸರಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿಜೆಪಿ ನಾಯಕರೇ, ‘ಮಗುವನ್ನು ಅಳುವಂತೆ ಮಾಡುವುದು ನೀವೇ, ನಂತರ ತೊಟ್ಟಿಲು ತೂಗುವುದು ನೀವೇ?’ ಎಷ್ಟು ಕಾಲ ಈ ಮೆಲೋ ಡ್ರಾಮಾ ಮುಂದುವರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಜಿಎಸ್ಟಿ ವ್ಯವಸ್ಥೆಯು ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿದ್ದು, ಜಿಎಸ್ಟಿ ಕೌನ್ಸಿಲ್ ಕೇಂದ್ರ ಸರಕಾರದಡಿಯಲ್ಲಿ ಕೆಲಸ ಮಾಡುತ್ತದೆ ಎಂಬುದು ಬಿಜೆಪಿ ನಾಯಕರಿಗೆ ತಿಳಿದಿಲ್ಲವೇ? ಅಥವಾ ತಿಳಿದು ಕೂಡ ಅಸಹಾಯಕರಾಗಿ, ಕೇಂದ್ರ ಸರಕಾರವನ್ನು ಪ್ರಶ್ನಿಸುವ ತಾಕತ್ತಿಲ್ಲದೇ ಜನರನ್ನು ದಾರಿ ತಪ್ಪಿಸಲು ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸುವ ಹುನ್ನಾರವೇ? ಎಂದು ಅವರು ಕಿಡಿಕಾರಿದ್ದಾರೆ.
ರಾಜ್ಯ ಬಿಜೆಪಿ ನಾಯಕರಿಗೆ ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳಿಗೆ ನಿಜವಾಗಿಯೂ ಸಹಾಯ ಮಾಡುವ ಕಾಳಜಿ ಇದ್ದಲ್ಲಿ, ಕೇಂದ್ರಕ್ಕೆ ನಿಯೋಗ ತೆರಳಿ ಈ ಸಮಸ್ಯೆ ಪರಿಹರಿಸಿ, ಅದು ಬಿಟ್ಟು, ವ್ಯಾಪಾರಿಗಳಿಗೆ ಉಚಿತವಾಗಿ ಅಡಿಟರ್ ಸಲಹೆ ನೀಡುತ್ತೀವೆ ಎಂದು ಜಾಹೀರಾತು ಹಾಕಿ ತಮ್ಮ ಮಾರ್ಯಾದೆಯನ್ನು ಮತ್ತಷ್ಟು ಕಳೆದುಕೊಳ್ಳಬೇಡಿ. ಬಿಜೆಪಿ ನಾಯಕರೇ ನಾಚಿಕೆ, ಮಾನ, ಮಾರ್ಯಾದೆ ಎಂಬ ಪದಕ್ಕೆ ಅರ್ಥವೇನಾದರೂ ಗೊತ್ತಿದ್ದರೆ, ಸತ್ಯ ಮಾತನಾಡುವುದನ್ನು ಕಲಿಯಿರಿ ಎಂದು ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ.
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ ಅದಕ್ಕೆ ರಾಜ್ಯ ಸರ್ಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿ.ಜೆ.ಪಿ ಅವರೇ,
— Ramalinga Reddy (@RLR_BTM) July 21, 2025
ಮಗುವನ್ನು ಅಳುವಂತೆ ಮಾಡುವುದು ನೀವೇ, ನಂತರ ತೊಟ್ಟಿಲು ತೂಗುವುದು ನೀವೇ? ಎಷ್ಟು ಕಾಲ ಈ ಮೆಲೋ ಡ್ರಾಮವನ್ನು ಮುಂದುವರಿಸುವ ಇರಾದೆ ಇದೆ ಎಂದು ತಿಳಿಸುವಿರಾ?
ಜಿಎಸ್ಟಿ… pic.twitter.com/Ak9dpeFglU







