ಮುಜರಾಯಿ ವ್ಯಾಪ್ತಿಗೆ ಬರುವ ಎಲ್ಲ ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್ ನಿಷೇಧ : ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿ
ಬೆಂಗಳೂರು, ಆ.13: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬುಧವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ.ಮಾದೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವಾಲಯದ ಆವರಣ ಸ್ವಚ್ಛತೆ ಕಾಪಾಡಲು ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚಿಸಲಾಗಿದ್ದು, ಆ.15ರಿಂದ ಆದೇಶ ಜಾರಿ ಬರಲಿದೆ ಎಂದರು.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ. ನಿಯಮ ಉಲ್ಲಂಘಿಸಿರುವುದು ಕಂಡುಬಂದರೆ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ತಿಳಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
Next Story





