ʼಧರ್ಮಸ್ಥಳʼ ಅನಾಮಿಕ ವ್ಯಕ್ತಿ ಹಿಂದೆ ಯಾರಿದ್ದಾರೆ ಎಂಬುವುದು ಎಸ್ಐಟಿ ತನಿಖೆಯಿಂದ ಹೊರಬರುತ್ತೆ : ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿ
ಬೆಂಗಳೂರು, ಆ.24: ಈ ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರು ಧರ್ಮ ರಕ್ಷಣೆ ಮಾಡಿಲ್ಲ ಏಕೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಎಂಬುವುದು ಎಸ್ಐಟಿ ತನಿಖೆಯಿಂದ ಹೊರಬರುತ್ತೆ. ಆದರೆ, ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಮಾಡಲಿಲ್ಲ, ಈಗ ಅವರು ಅಧಿಕಾರದಲ್ಲಿ ಇಲ್ಲ ಎಂದು ಧರ್ಮ ರಕ್ಷಣೆ ಕುರಿತು ಮಾತನಾಡುತ್ತಾರೆ ಎಂದು ತಿಳಿಸಿದರು.
ಧರ್ಮಕ್ಷೇತ್ರದ ಬಗ್ಗೆ, ಧರ್ಮಾಧಿಕಾರಿಗಳ ಬಗ್ಗೆ ಬಹಳ ವರ್ಷಗಳಿಂದ ಸಾಕಷ್ಟು ಚರ್ಚೆಯಾಗುತ್ತಿತ್ತು. ಯೂಟ್ಯೂಬರ್ಸ್ ಕೂಡ ಮಾತನಾಡಿದ್ದಾರೆ. ಇದರ ನಡುವೆ ಬಿಜೆಪಿಗರು ಧರ್ಮ ರಕ್ಷಣೆ ಕರೆ ಕೊಟ್ಟಿದ್ದಾರೆ. ನಾಲ್ಕು ವರ್ಷ ಬಿಜೆಪಿ ಸರಕಾರ ಇತ್ತು. ಅರಗ ಜ್ಞಾನೇಂದ್ರ ಗೃಹ ಮಂತ್ರಿಗಳಾಗಿದ್ದರು, ಯಡಿಯೂರಪ್ಪ ಅವರು ಸಿಎಂ ಆಗಿದ್ದರು, ಆಗ ಇದನ್ನೆಲ್ಲಾ ನಿಲ್ಲಿಸಬಹುದಿತ್ತು ಅಲ್ಲವೇ ಎಂದು ಸಚಿವರು ಪ್ರಶ್ನಿಸಿದರು.
Next Story





