Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳದ ದೇವಸ್ಥಾನ ಮುಜರಾಯಿಗೆ ನೀಡುವ...

ಧರ್ಮಸ್ಥಳದ ದೇವಸ್ಥಾನ ಮುಜರಾಯಿಗೆ ನೀಡುವ ಪ್ರಸ್ತಾವ ಸರಕಾರದ ಮುಂದಿಲ್ಲ: ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ26 Sept 2025 11:18 PM IST
share
ಧರ್ಮಸ್ಥಳದ ದೇವಸ್ಥಾನ ಮುಜರಾಯಿಗೆ ನೀಡುವ ಪ್ರಸ್ತಾವ ಸರಕಾರದ ಮುಂದಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಸೆ. 26: ‘ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ನೀಡುವ ಯಾವುದೇ ರೀತಿಯ ಪ್ರಸ್ತಾವ ರಾಜ್ಯ ಸರಕಾರದ ಮುಂದೆ ಇಲ್ಲ’ ಎಂದು ಮುಜರಾಯಿ ಹಾಗೂ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೂ ದೇವಾಲಯಗಳನ್ನು ಧಾರ್ಮಿಕ ದತ್ತಿ ಇಲಾಖೆಯಿಂದ ಬಿಡುಗಡೆ ಮಾಡಬೇಕು’ ಎಂದು ಕೋರಿ ವಿಎಚ್‍ಪಿ, ರಾಜ್ಯಪಾಲರಿಗೆ ನೀಡಿರುವ ದೂರು ನೀಡಿದೆ. ಇಷ್ಟೆಲ್ಲಾ ಮಾಡುವ ಅಗತ್ಯವಿಲ್ಲ. ಅದರ ಬದಲಿಗೆ ದೇಶದಲ್ಲೇ ಮೋದಿ ನೇತೃತ್ವದ ಸರಕಾರವೇ ಒಂದು ಕಾನೂನು ತಂದರೆ ನಮ್ಮ ಅಭ್ಯಂತರವಿಲ್ಲ’ ಎಂದು ತಿರುಗೇಟು ನೀಡಿದರು.

‘ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯೇ ಇರಲಿಲ್ಲ. ಅನುವಂಶಿಕ ದೇವಾಲಯಗಳಿದ್ದವು. ಆಗ ಅಣ್ಣ-ತಮ್ಮಂದಿರು, ಸಂಬಂಧಿಕರ ಮಧ್ಯೆಯೇ ದೇವಾಲಯಗಳ ಉತ್ತರಾಧಿಕಾರಿಗಳ ನಡುವೆ ಜಗಳ, ವಿವಾದಗಳು ಆರಂಭವಾದ ಕಾರಣ ಬ್ರಿಟಿಷರ ಕಾಲದಲ್ಲಿ ಮುಜರಾಯಿ ಇಲಾಖೆ ಅಸ್ತಿತ್ವಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷವು ಈ ಇಲಾಖೆಯನ್ನು ಸೃಷ್ಟಿಸಿಲ್ಲ’ ಎಂದು ರಾಮಲಿಂಗಾರೆಡ್ಡಿ ವಿವರಣೆ ನೀಡಿದರು.

‘ರಾಜ್ಯದಲ್ಲಿರುವ ‘ಸಿ’ ವರ್ಗದ ದೇವಾಲಯಗಳಿವೆ, ಅವುಗಳನ್ನು ಅಭಿವೃದ್ಧಿ ಮಾಡಿದರೆ ಸಾಕಾಗಿದೆ. ಅದಕ್ಕೂ ಬಿಜೆಪಿಯವರು ಅಡ್ಡ ಬಂದರು. ಬಿಜೆಪಿ ಅವರು ದೇವರ ಕೆಲಸಕ್ಕೂ ಅಡ್ಡಿಪಡಿಸುತ್ತಾರೆ ಎಂದು ದೂರಿದ ರಾಮಲಿಂಗಾರೆಡ್ಡಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ’ಯೋಜನೆಯಿಂದ ದೇವಾಲಯಗಳಿಗೆ ಆದಾಯ ಬರುತ್ತಿದೆ ಎಂದರು.

ಸಾರಿಗೆ ಇಲಾಖೆಗೆ ‘ಶಕ್ತಿ’ ಯೋಜನೆಯಡಿ ಸರಕಾರದಿಂದ ಅನುದಾನ ಬಾಕಿಯಿದೆ. ಅದರಲ್ಲಿ ಒಂದು ಸಾವಿರ ಕೋಟಿ ರೂ.ಉಚಿತವಾಗಿ ನೀಡಿದ್ದಾರೆ. 3 ಸಾವಿರ ಕೋಟಿ ರೂ.ಬಾಕಿಯಿತ್ತು. ಒಂದು ಸಾವಿರ ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆಗೆ ಹಿಂದಿನ ಬಿಜೆಪಿ ಸರಕಾರವೇ ಮೂಲ ಕಾರಣ. ಕಾಂಗ್ರೆಸ್ ಸರಕಾರ ನಗರದ ರಸ್ತೆ ಗುಂಡಿಗಳನ್ನು ಮುಚ್ಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಅಗತ್ಯ ಅನುದಾನವನ್ನು ಒದಗಿಸಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

Tags

Ramalingareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X