ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಇಕ್ಬಾಲ್ ಹುಸೇನ್
ಬೆಂಗಳೂರು: ರಾಮನಗರ ಕ್ಷೇತ್ರದ ಕಾಂಗ್ರೇಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ವೈದ್ಯರ ತ್ವರಿತ ಚಿಕಿತ್ಸೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಪ್ರಸ್ತುತ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿರುವ ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
Next Story




