Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭೂಮಿ ಒತ್ತುವರಿ ಕುರಿತು ಲ್ಯಾಂಡ್...

ಭೂಮಿ ಒತ್ತುವರಿ ಕುರಿತು ಲ್ಯಾಂಡ್ ಆಡಿಟಿಂಗ್ ನಡೆಸುವಂತೆ ರಮೇಶ್ ಬಾಬು ಮನವಿ

ವಾರ್ತಾಭಾರತಿವಾರ್ತಾಭಾರತಿ12 Sept 2023 11:55 PM IST
share
ಭೂಮಿ ಒತ್ತುವರಿ ಕುರಿತು ಲ್ಯಾಂಡ್ ಆಡಿಟಿಂಗ್ ನಡೆಸುವಂತೆ ರಮೇಶ್ ಬಾಬು ಮನವಿ

ಬೆಂಗಳೂರು, ಸೆ.12: ಬೆಂಗಳೂರು ಮತ್ತು ಸುತ್ತಮುತ್ತಲಿನ ಭೂಮಿಯ ಬೆಲೆಯು ಬಹಳಷ್ಟು ಏರಿಕೆಯಾಗಿದ್ದು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಮತ್ತು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ಅಕ್ರಮ ದಾಖಲೆಗಳನ್ನು ನಿರ್ಮಿಸಿ ಸ್ವಾಧೀನದಲ್ಲಿರುವುದು ಅಂಕಿ ಅಂಶಗಳ ಮೂಲಕ ಬಹಿರಂಗವಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ಎ.ಟಿ.ರಾಮಸ್ವಾಮಿ ನೇತೃತ್ವದ ಸದನ ಸಮಿತಿ, ವಿ.ಬಾಲಸುಬ್ರಮಣ್ಯನ್ ಸಮಿತಿ ನೀಡಿರುವ ವರದಿಗಳಲ್ಲಿ ದಾಖಲೆಯ ಸಮೇತ ಇಂತಹ ಭೂ ಕಬಳಿಕೆ ಪ್ರಕರಣಗಳನ್ನು ಬಹಿರಂಗಪಡಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಮತ್ತು ಇದರ ಸುಮಾರು ಒಂದು ನೂರು ಕಿಮೀ ವ್ಯಾಪ್ತಿಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೆಸಾರ್ಟ್‍ಗಳು (ತಂಗುದಾಣಗಳು) ಮತ್ತು ಸ್ಟೇ ಹೋಮ್‍ಗಳು ತಲೆಯೆತ್ತಿವೆ. ವಿಶೇಷವಾಗಿ ಬಹುತೇಕ ಇಂತಹ ತಂಗುದಾಣಗಳು ಸರಕಾರಿ ಕಂದಾಯ ಭೂಮಿಯ ಒತ್ತುವರಿ ಅಥವಾ ಅಕ್ರಮ ದಾಖಲೆಯ ಮೂಲಕ ಸ್ವಾಧೀನವನ್ನು ಹೊಂದಿವೆ ಎಂದು ಅವರು ದೂರಿದ್ದಾರೆ.

ದಾಖಲೆಗಳಲ್ಲಿ ಇರುವ ವಿಸ್ತೀರ್ಣಕ್ಕೂ ಇವರು ಸ್ವಾಧೀನದಲ್ಲಿರುವ ವಿಸ್ತೀರ್ಣಕ್ಕೂ ಬಹಳಷ್ಟು ವ್ಯತ್ಯಾಸ ಇದೆ. ಕಂದಾಯ ದಾಖಲೆಗಳನ್ನು ತಿದ್ದುವ ಮೂಲಕ ಸರಕಾರಿ ಭೂಮಿಯಲ್ಲಿ ವಿಲಾಸಿ ತಂಗುದಾಣಗಳನ್ನು ಹೊಂದಿರುವ ಮತ್ತು ನಡೆಸುತ್ತಿರುವ ಅನೇಕ ದೂರುಗಳು ದಾಖಲಾಗಿವೆ. ರಾಜ್ಯ ಸರಕಾರವು ಇಂತಹ ಅನುಮಾನಿತ ಮತ್ತು ಆರೋಪಿತ ರೆಸಾರ್ಟ್‍ಗಳ/ ತಂಗುದಾಣಗಳ ಭೂಮಿ ಲೆಕ್ಕ ಪರಿಶೋಧನೆಯನ್ನು (ಲ್ಯಾಂಡ್ ಆಡಿಟಿಂಗ್) ಮಾಡಬೇಕು ಎಂದು ರಮೇಶ್ ಬಾಬು ಆಗ್ರಹಿಸಿದ್ದಾರೆ.

ಅಲ್ಲದೆ, ಒತ್ತುವರಿಯಾಗಿರುವ ಸರಕಾರಿ ಭೂಮಿಯನ್ನು ತೆರವುಗೊಳಿಸಿ ಅದನ್ನು ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಿದರೆ ಸಾವಿರಾರು ಕೋಟಿ ರೂಪಾಯಿಗಳ ಆದಾಯ ಸರಕಾರಕ್ಕೆ ಬರಲಿದೆ. ಬೆಂಗಳೂರು ನಗರ, ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 75 ಸಾವಿರ ಎಕರೆ ಭೂಮಿಯನ್ನು ಒತ್ತುವರಿ ಮಾಡಿರುವ ಮಾಹಿತಿಯು ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

ತಂಗುದಾಣಗಳ ಅಕ್ರಮ ಭೂಮಿ ಸ್ವಾಧೀನ ಕುರಿತು ಲ್ಯಾಂಡ್ ಆಡಿಟಿಂಗ್ ಮಾಡಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯ ಸರಕಾರದ ಸಂಪನ್ಮೂಲ ಕ್ರೋಡಿಕರಣದ ದೃಷ್ಟಿಯಿಂದ ಅವಶ್ಯಕವಾಗಿದ್ದು, ತಾವು ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡುವುದರ ಮೂಲಕ ಕ್ರಮ ಕೈಗೊಳ್ಳುವಂತೆ ರಮೇಶ್ ಬಾಬು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X