ವಿಜಯೇಂದ್ರನಿಗಿಂತ ಹೆಚ್ಚು ಯತ್ನಾಳ್ ಬೆಳೆದಿದ್ದಾರೆ : ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದಲ್ಲಿ ಲಿಂಗಾಯತ ಮತ್ತು ಹಿಂದೂ ನಾಯಕನಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನಿಗಿಂತ ಹೆಚ್ಚಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎತ್ತರಕ್ಕೆ ಬೆಳೆದಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಚ್ಛಾಟನೆ ಬಳಿಕ ಯತ್ನಾಳ್ ಮತ್ತು ವಿಜಯೇಂದ್ರ ಅವರನ್ನು ಹೋಲಿಕೆ ಮಾಡಿ ನೋಡಿ. ರಾಜ್ಯದಲ್ಲಿ ಲಿಂಗಾಯತ ಮತ್ತು ಹಿಂದೂ ನಾಯಕನಾಗಿ ಯತ್ನಾಳ್ ಎತ್ತರಕ್ಕೆ ಬೆಳೆದರೆ ವಿಜಯೇಂದ್ರ ಕೆಳಗಿಳಿದಿದ್ದಾರೆ. ಇದು ಎಲ್ಲರೂ ಒಪ್ಪುವ ಮಾತು ಎಂದು ತಿಳಿಸಿದರು.
ಜೆಸಿಬಿ ಹೊಸ ಪಕ್ಷ ಕಟ್ಟುವ ಬಗ್ಗೆ ಯತ್ನಾಳ್ ಹೇಳಿದ್ದಾರೆ. ಆದರೆ, ನಾವು ಬಿಜೆಪಿಯಲ್ಲೇ ಮುಂದುವರಿಯುತ್ತೇವೆ. ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ಯತ್ನಾಳ್ ಅವರನ್ನು ನಮ್ಮ ಪಕ್ಷಕ್ಕೆ ವಾಪಸ್ ಕರೆ ತರುವ ಪ್ರಯತ್ನ ಮಾಡುವೆ ಎಂದ ಅವರು, ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ್ ಜಾರಕಿಹೊಳಿ ಸೇರಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಆದರೆ, ನಮ್ಮ ಬಿಜೆಪಿ ನಾಯಕರ ಇತ್ತೀಚಿನ ಹೇಳಿಕೆಗಳನ್ನು ನೋಡಿ ಅಸಹ್ಯ ಎನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.







