Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೈವಪಾತ್ರದ ಅಪಹಾಸ್ಯ; ರಣವೀರ್ ಸಿಂಗ್‌...

ದೈವಪಾತ್ರದ ಅಪಹಾಸ್ಯ; ರಣವೀರ್ ಸಿಂಗ್‌ ಕ್ಷಮೆಯಾಚಿಸಿ, ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ : ಹೈಕೋರ್ಟ್‌ಗೆ ವಕೀಲರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ24 March 2026 8:02 PM IST
share
ದೈವಪಾತ್ರದ ಅಪಹಾಸ್ಯ; ರಣವೀರ್ ಸಿಂಗ್‌ ಕ್ಷಮೆಯಾಚಿಸಿ, ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ : ಹೈಕೋರ್ಟ್‌ಗೆ ವಕೀಲರ ಹೇಳಿಕೆ

ಬೆಂಗಳೂರು : ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ‌ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸುವ ಜತೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ ಎಂದು ರಣವೀರ್ ಪರ ಹಿರಿಯ ವಕೀಲ ಸಜನ್ ಪೂವಯ್ಯ ಹೈಕೋರ್ಟ್‌ಗೆ ತಿಳಿಸಿದರು.

ಪ್ರಕರಣ ಸಂಬಂಧ ನಗರದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ರಣವೀರ್ ಸಿಂಗ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಖಾಸಗಿ ದೂರುದಾರರಾದ ಪ್ರಶಾಂತ್‌ ಮೆಥಲ್‌ ಪರ ವಕೀಲ ಸಿಜಿ ಮಲಯಾಳಿ ಅವರು, ರಣವೀರ್‌ ಸಿಂಗ್‌ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಕ್ಷಮೆ ಕೇಳಿದ್ದಾರೆ. ಆದರೆ, ಅದರಲ್ಲಿ ಪ್ರಾಮಾಣಿಕತೆ ಕಾಣುವುದಿಲ್ಲ. ಹೃದಯಪೂರ್ವಕವಾಗಿ ಅವರು ಕ್ಷಮೆಯಾಚಿಸಿಲ್ಲ. ಅವರ ಮ್ಯಾನೇಜರ್‌ಗಳು ಟ್ವೀಟ್‌ ಮಾಡಿದ್ದಾರೆ. ಚಾವುಂಡಿ ದೈವವನ್ನು 'ಹೆಣ್ಣು ದೆವ್ವ' ಎಂದು ಕರೆದಿದ್ದಾರೆ. ಮೌಖಿಕವಾಗಿ ದೈವಕ್ಕೆ ಅಪಮಾನ ಮಾಡಿರುವುದರಿಂದ ಅವರು ಮೌಖಿಕವಾಗಿ ಕ್ಷಮೆ ಕೋರಬೇಕು. ಚಾಮುಂಡಿ ಬೆಟ್ಟಕ್ಕೆ ಸಜನ್‌ ಪೂವಯ್ಯ ಅವರ ಜತೆ ಹೋಗಿ ರಣವೀರ್‌ ಅಲ್ಲಿಯೇ ಕ್ಷಮೆ ಕೋರಲಿ ಎಂದರು.

ಆಗ ನ್ಯಾಯಪೀಠ, ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸುವುದಾಗಿ ಅರ್ಜಿದಾರರು ಹೇಳುತ್ತಿದ್ದಾರೆ. ಇನ್ನೇನು ಬೇಕು? ಅರ್ಜಿದಾರರು ಮಾಡಿರುವುದು ಸರಿಯಲ್ಲ. ಅದನ್ನು ಬೆಂಬಲಿಸುವುದಿಲ್ಲ. ನ್ಯಾಯಾಲಯಕ್ಕೆ ಬಂದು ಕ್ಷಮೆ ಕೋರಬೇಕು ಎಂದು ನೀವು (ದೂರುದಾರರು) ಬಯಸುತ್ತಿದ್ದೀರಾ? ಪ್ರಮಾದವಾಗಿದೆ. ರಣವೀರ್‌ ದೇವಾಲಯಕ್ಕೆ ಭೇಟಿ ನೀಡಬೇಕು. ಪಶ್ಚಾತಾಪ ವ್ಯಕ್ತಪಡಿಸುವ ಮನಸ್ಸಿರಬೇಕು. ನಟರು ಪ್ರಭಾವ ಬೀರುವ ಹೆಚ್ಚು ಶಕ್ತಿಯನ್ನು ಹೊಂದಿರುತ್ತಾರೆ ಎಂದು ನುಡಿಯಿತು.

ರಣವೀರ್‌ ಪರ ಹಿರಿಯ ವಕೀಲ ಸಜನ್‌ ಪೂವಯ್ಯ ಅವರು, ಕ್ಷಮೆ ಕೋರಿ ರಣವೀರ್‌ ಪ್ರಮಾಣಪತ್ರ ಸಲ್ಲಿಸಲಿದ್ದಾರೆ. ಹಾಗೆಯೇ ದೇವಸ್ಥಾನಕ್ಕೂ ಭೇಟಿ ನೀಡುತ್ತಾರೆ. ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಏಪ್ರಿಲ್‌ 10ಕ್ಕೆ ಮುಂದೂಡಿತು.

Tags

Ranveer SinghHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X