ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ | ಆ.1ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ

ಪ್ರಜ್ವಲ್ ರೇವಣ್ಣ
ಬೆಂಗಳೂರು : ಹೊಳೆನರಸೀಪುರದ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನ ಕಾಲ ಮುಂದೂಡಿದೆ.
ಮಹಿಳೆಯ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಚಾರ್ಚ್ ಶೀಟ್ ಮೇಲೆ ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪುನ್ನು ಕಾಯ್ದಿರಿಸಿದ್ದರು.
ಅದರೆ, ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ ಎಂದು ಜಡ್ಜ್ ಸಂತೋಷ್ ಗಜಾನನ ಭಟ್ ತಿಳಿಸಿ, ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಿದ್ದಾರೆ.
Next Story





