Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ...

ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ವಿಪಕ್ಷ ನಾಯಕ ಅಶೋಕ್‌ ಹೀಗೆ ಹೇಳಿದ್ದೇಕೆ?

ವಾರ್ತಾಭಾರತಿವಾರ್ತಾಭಾರತಿ31 Aug 2024 4:37 PM IST
share
ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ವಿಪಕ್ಷ ನಾಯಕ ಅಶೋಕ್‌ ಹೀಗೆ ಹೇಳಿದ್ದೇಕೆ?

ಬೆಂಗಳೂರು : ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್‌.ಅಶೋಕ್ ಟೀಕಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಕಾಂಗ್ರೆಸ್‌ ಸರಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ" ಎಂದರು.

ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್‌ ಕಚೇರಿಯಾಗಿತ್ತೇ? ಕಾಂಗ್ರೆಸ್‌ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರದಿಂದ ಮೆರೆಯುವ ಕಾಂಗ್ರೆಸ್‌ ನಾಯಕರು, ಈ ಸರಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ ಎಂಬುದು ಈ ಮೂಲಕ ಕಂಡುಬಂದಿದೆ ಎಂದರು.

ಎಲ್ಲರೂ ರಾಜೀನಾಮೆ ನೀಡಿ‌ : ಪಕ್ಷದಿಂದ ಪ್ರತಿಭಟನೆ ಎನ್ನುವುದಾದರೆ ಎಲ್ಲ ಸಚಿವರು ರಾಜೀನಾಮೆ ನೀಡಿ ನಂತರ ಪ್ರತಿಭಟನೆ ಮಾಡಲಿ. ಇಲ್ಲಿ ಡಬಲ್‌ ಆಕ್ಟಿಂಗ್‌ ಮಾಡುವುದು ಬೇಡ. ರಾಜಭವನದ ದುರುಪಯೋಗ ಎನ್ನುವ ಆರೋಪ ಸವಕಲು ನಾಣ್ಯವಾಗಿದೆ. ಸಿದ್ದರಾಮಯ್ಯ ಅವರಿಗೆ ಭಯ ಏಕೆ? ಅವರ ರಕ್ಷಣೆಗೆ ನ್ಯಾಯಾಲಯವಿದೆ. ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್‌ ಚೇರ್‌ ನಡೆಯುತ್ತಿದ್ದು, ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಒಂದೊಂದು ಸಮುದಾಯದವರು ಒಂದೊಂದು ಕಡೆ ಆಹಾರದ ಮೇಳ ನಡೆಸುತ್ತಿದ್ದಾರೆ. ಎಲ್ಲರೂ ಸಿಎಂ ಕುರ್ಚಿಗೆ ಟವೆಲ್‌ ಹಾಕುತ್ತಿದ್ದಾರೆ. ಈ ಆಹಾರ ಮೇಳಗಳನ್ನು ಸಿಎಂ ಸಿದ್ದರಾಮಯ್ಯ ನಿಯಂತ್ರಿಸಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X