Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ...

ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ : ಆರ್‌.ಅಶೋಕ್‌

ವಾರ್ತಾಭಾರತಿವಾರ್ತಾಭಾರತಿ13 Sept 2024 3:07 PM IST
share
ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ : ಆರ್‌.ಅಶೋಕ್‌

ಬೆಂಗಳೂರು : "ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ನಿರ್ಧಾರ ಮಾಡಿದಂತಿದೆ" ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದ ಗಲಾಟೆ ಪ್ರಕರಣ ಸಂಬಂಧ ರಾಜ್ಯ ಸರಕಾರವನ್ನು ಟೀಕಿಸಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, "ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ" ಎಂದು ಹೇಳಿದ್ದಾರೆ.

"ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವ ಮಾತಾಡುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ಸರ್ಕಾರ ನಿರ್ಧಾರ ಮಾಡಿದಂತಿದೆ" ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರಶ್ನೆಗಳಿಗೆ ಉತ್ತರಿಸಿ :

ನೆಲಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ ಎಂದಿರುವ ಆರ್‌.ಅಶೋಕ್, ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

1.) ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಿಲ್ಲವೇಕೆ?

2.) ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ?

3.)ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ?

4) ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?

5) ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?

6) ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ ನಲ್ಲಿ ಎ1 ಮಾಡಿರುವುದೇಕೆ?

7) ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?

8) ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?

9) ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?

10) ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ ನಷ್ಟವಾದರೂ, ಗೃಹ ಸಚಿವರಿಗೆ ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣವೇನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?

11) ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇನ್ನೂ ಭೇಟಿ ನೀಡಿಲ್ಲವೇಕೆ?

ಈ ರೀತಿ ಹಿಂದೂಗಳ ವಿರುದ್ಧವೇ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈ ಬಿಡದಿದ್ದರೆ ನಾಗಮಂಗಲದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆರ್‌.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X