Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಳ ಮೀಸಲಾತಿ ಜಾರಿಗೆ ಮೀನಮೇಷ...

ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್ : ಆರ್.ಅಶೋಕ್‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Oct 2024 3:16 PM IST
share
ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್ : ಆರ್.ಅಶೋಕ್‌ ಆಕ್ರೋಶ

ಬೆಂಗಳೂರು : "ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ" ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ರವಿವರಾ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಎಸ್ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ :

ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ. ಬಿ.ಎಸ್.ಯಡಿಯೂರಪ್ಪನವರ ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.‌ ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದರು.

ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರ ಕ್ಲೀನ್ ಚಿಟ್ ಯಾರಿಗೂ ಬೇಕಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X