Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಪಕ್ಷಗಳ ಮೇಲೆಯೇ ಹರಿಹಾಯುವುದು ಯಾವ...

ವಿಪಕ್ಷಗಳ ಮೇಲೆಯೇ ಹರಿಹಾಯುವುದು ಯಾವ ಸೀಮೆ ನ್ಯಾಯ? : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ20 Oct 2024 6:10 PM IST
share
ವಿಪಕ್ಷಗಳ ಮೇಲೆಯೇ ಹರಿಹಾಯುವುದು ಯಾವ ಸೀಮೆ ನ್ಯಾಯ? : ಆರ್.ಅಶೋಕ್

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿಯವರೇ, ಸರಕಾರದ ತಪ್ಪುಗಳನ್ನ, ಆಡಳಿತದಲ್ಲಿರುವ ನ್ಯೂನ್ಯತೆಗಳನ್ನ ಎತ್ತಿ ತೋರಿಸಿ, ಜನರ ದನಿಯನ್ನ ಸರಕಾರಕ್ಕೆ ತಲುಪಿಸುವುದೇ ವಿಪಕ್ಷದ ಕೆಲಸ. ವಿಪಕ್ಷ ನಾಯಕನಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ವಿಪಕ್ಷಗಳ ಟೀಕೆ ಮಾಡಿದ ಮೇಲಾದರೂ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗುವ ಬದಲು ವಿಪಕ್ಷಗಳ ಮೇಲೆಯೇ ಹರಿಹಾಯುವುದು ಯಾವ ಸೀಮೆ ನ್ಯಾಯ ಸ್ವಾಮಿ?’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ರವಿವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಸರಕಾರದ ರೈತ ವಿರೋಧಿ ಧೋರಣೆ ಬಗ್ಗೆ ವಿಪಕ್ಷಗಳು ಟೀಕೆ ಮಾಡುವುದಿರಲಿ. ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಅನೇಕ ಸಂದರ್ಭಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಸರಕಾರ ರೈತರ ಪರ ಯಾವುದೇ ವಿಶೇಷ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ. ಸರಕಾರದ ಧೋರಣೆ ನೋಡಿದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎನಿಸುವಷ್ಟು ಬೇಸರವಾಗಿದೆ’ ಎಂದು ಕಾಗವಾಡ ಶಾಸಕ ರಾಜು ಕಾಗೆ ಇತ್ತೀಚೆಗಷ್ಟೇ ಹೇಳಿದ್ದರು’ ಎಂದು ಉಲ್ಲೇಖಿಸಿದ್ದಾರೆ.

‘ನಿಮ್ಮ ಸರಕಾರದ ರೈತ ವಿರೋಧಿ ನೀತಿಗಳನ್ನು ಹಾಗೂ ಲೋಡ್ ಶೆಡ್ಡಿಂಗ್ ಕಣ್ಣಾಮುಚ್ಚಾಲೆಯನ್ನು ನಿಮ್ಮದೇ ಪಕ್ಷದ ಶಾಸಕ ರಾಜು ಕಾಗೆ ಈ ಹಿಂದೆ ಎಳೆ ಎಳೆಯಾಗಿ ಬಿಚ್ಟಿಟ್ಟಿದ್ದಾರೆ. ಶಾಸಕರಿಗೆ ಕನಿಷ್ಟ ಅನುದಾನವು ಸರಕಾರದಿಂದ ಲಭಿಸುತ್ತಿಲ್ಲ, ಸರಕಾರ ಗ್ರಾಮೀಣ ಭಾಗದಲ್ಲಿ ವಿದ್ಯುತ್ ನೀಡಿದ್ದಕ್ಕಿಂತ ತೆಗೆದದ್ದೇ ಹೆಚ್ಚು ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನವಲಗುಂದದ ಶಾಸಕ ಎನ್.ಎಚ್.ಕೋನರೆಡ್ಡಿ ತಮ್ಮ ಕ್ಷೇತ್ರದಲ್ಲಿ ಬಹುತೇಕ ರೈತರಿಗೆ ಮುಂಗಾರು ಬರ ಪರಿಹಾರವೇ ವಿತರಣೆ ಆಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಅಕಾಲಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಬಗ್ಗೆ ಸರಕಾರಕ್ಕೆ ಅರಿವಿದೆ, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಉಡಾಫೆ ಮಾತುಗಳು, ಹಾರಿಕೆ ಉತ್ತರಗಳು ರೈತರ ಸಮಸ್ಯೆ ಬಗೆಹರಿಸುವುದಿಲ್ಲ. ಕೃಷಿ ಸಚಿವರಾಗಿ ತಾವು ಎಷ್ಟು ಜಿಲ್ಲೆಗಳಿಗೆ ಭೇಟಿ ನೀಡಿದ್ದೀರಿ? ಯಾವ್ಯಾವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದೀರಿ? ಬೆಳೆ ಹಾನಿ ಸಮೀಕ್ಷೆ ನಡೆಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಹಿಂದೆ ಅನೇಕ ಮುತ್ಸದ್ದಿಗಳು, ಹಿರಿಯರು ನಿರ್ವಹಿಸಿದ ಕೃಷಿ ಇಲಾಖೆಯ ಮಂತ್ರಿ ಆಗಿದ್ದೀರಿ. ಇಲಾಖೆಯ ಗಂಭೀರತೆ ಅರಿತು ಜವಾಬ್ದಾರಿಯಿಂದ ನಡೆದುಕೊಳ್ಳಿ ಎಂದು ಅಶೋಕ್ ಸಲಹೆ ನೀಡಿದ್ದಾರೆ.

‘ಅಭದ್ರವಾಗಿರುವ ಸರಕಾರದಲ್ಲಿ ಸಿಎಂ ಸಿದ್ದರಾಮಯ್ಯರ ಜೊತೆ ಇರಬೇಕೋ ಅಥವಾ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಇರಬೇಕೋ ಎನ್ನುವ ತಳಮಳ, ಗೊಂದಲ ತಮ್ಮನ್ನ ಕಾಡುತ್ತಿದೆ ಎಂದು ಗೊತ್ತಿದೆ. ತಮಗೆ ನನ್ನ ಕಿವಿಮಾತು ಏನೆಂದರೆ ತಾವು ನಾಡಿನ ರೈತರ ಜೊತೆಗೆ ಇರಿ. ಆಗ ಎಲ್ಲವೂ ತಾನಾಗಿಯೇ ಸರಿಹೋಗುತ್ತದೆ. ತಮ್ಮ ಕರ್ತವ್ಯ ನಿರ್ವಹಣೆ ಮಾಡಿ ರೈತರಿಗೆ ನೆರವಾಗಿ. ಅದೇ ನಿಮ್ಮನ್ನ ಕಾಪಾಡುತ್ತದೆ

-ಆರ್.ಅಶೋಕ್, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X