Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ...

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್‌, ಇದರಲ್ಲಿ ಚಮತ್ಕಾರವೇನೂ ಇಲ್ಲ : ಆರ್‌.ಅಶೋಕ್‌

"ಸರಕಾರದ ಹಗರಣ ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮುಂದುವರಿಸಲಿದೆ"

ವಾರ್ತಾಭಾರತಿವಾರ್ತಾಭಾರತಿ23 Nov 2024 4:49 PM IST
share
ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್‌, ಇದರಲ್ಲಿ ಚಮತ್ಕಾರವೇನೂ ಇಲ್ಲ : ಆರ್‌.ಅಶೋಕ್‌

ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್‌ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್‌ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದರು.

ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂಜರಿಯಬೇಕಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಪಕ್ಷ ಗೆಲ್ಲಲಿದೆ. ಕಾಂಗ್ರೆಸ್‌ನ ಪಾಪದ ಕೊಡ ಬಹುತೇಕ ತುಂಬಿದೆ. ಪೂರ್ತಿ ತುಂಬಿದ ಬಳಿಕ ಪಕ್ಷ ಅವನತಿಗೆ ಹೋಗಲಿದೆ. ಕಾಂಗ್ರೆಸ್‌ ಸರಕಾರದ ಹಗರಣಗಳನ್ನು ಇನ್ನಷ್ಟು ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್‌ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರವೇನೂ ಇಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಯಶಸ್ಸು ದೊರೆತಿದೆ. ಜಾರ್ಖಂಡ್‌ನಲ್ಲಿ ಮತ ಗಳಿಕೆ ಕಡಿಮೆಯಾಗಿದೆ. ಒಟ್ಟಾರೆಯಾಗಿ ಜನರ ಅಭಿಪ್ರಾಯವನ್ನು ಗೌರವಿಸುತ್ತೇವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆ ಹೇಳಿತ್ತು. ಆದರೆ ಜನರು ಅವರನ್ನು ತಿರಸ್ಕರಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X