Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ...

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ : ಆರ್‌.ಅಶೋಕ್‌ ಆಕ್ರೋಶ

"ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ"

ವಾರ್ತಾಭಾರತಿವಾರ್ತಾಭಾರತಿ12 Feb 2025 5:20 PM IST
share
ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ : ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡಿ ಎಂದು ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ. ಸರಕಾರಿ ಕೆಲಸ ದೇವರ ಕೆಲಸ ಎಂದು ಮಾಜಿ ಸಿಎಂ ಕೆಂಗಲ್‌ ಹನುಮಂತಯ್ಯ ಬರೆಸಿದ್ದಾರೆ. ಕಾಂಗ್ರೆಸ್‌ನಿಂದಾಗಿ ಇದು ದೆವ್ವಗಳ ಕೆಲಸ ಎಂಬಂತಾಗಿದೆ. ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಯ ಮೇಲೆ ಲಾರಿ ಹತ್ತಿಸಿ ಕೊಲ್ಲುವುದಾಗಿ ಶಾಸಕರ ಮಗ ಜೀವ ಬೆದರಿಕೆ ಹಾಕಿದ್ದಾನೆ. ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಮಾಫಿಯಾ ಕೈಯಲ್ಲಿ ಸರಕಾರ ಸಿಲುಕಿರುವುದರಿಂದ ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಎಫ್‌ಐಆರ್‌ನಲ್ಲಿ ಶಾಸಕ ಸಂಗಮೇಶ್‌ ಪುತ್ರನ ಹೆಸರಿಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ. ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು ಎಂದರು.

ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಮೈಸೂರಿನಲ್ಲಿ ಯಾರನ್ನೂ ಬಂಧಿಸಿಲ್ಲ. ಇಡೀ ಸರಕಾರ ಗಲಭೆಕೋರರ ಪರವಾಗಿ ನಿಂತಿದೆ. ಅದರ ಬದಲು ಪೊಲೀಸ್‌ ಅಧಿಕಾರಿಗಳನ್ನೇ ಟೀಕಿಸಲಾಗುತ್ತಿದೆ. ಮುಸ್ಲಿಮರಿಂದ ಗೆದ್ದ ಸಚಿವರು ಅವರ ಪರವಾಗಿ ಮಾತಾಡುತ್ತಿದ್ದಾರೆ ಎಂದರು.

ಭದ್ರಾವತಿಯ ಮಹಿಳಾ ಅಧಿಕಾರಿಯ ಮೇಲೆ ಒತ್ತಡ ಹೇರಲಾಗಿದೆ. ಆ ಭಯದಿಂದಲೇ ಅವರು ಯಾರ ಮೇಲೂ ದೂರು ನೀಡಿಲ್ಲ. ದೂರು ಕೊಟ್ಟರೂ ಸರಕಾರ ಅಧಿಕಾರಿಯ ಪರವಾಗಿ ನಿಲ್ಲುವುದಿಲ್ಲ. ಪೊಲೀಸ್‌ ಅಧಿಕಾರಿಗೆ ಸ್ಟಾರ್‌ ಕೊಟ್ಟವರು ಯಾರು ಎಂದು ಸಚಿವ ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಪೊಲೀಸರಿಗೆ ಜನರು ಸ್ಟಾರ್‌ ನೀಡಿದ್ದಾರೆ. ಅವರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆಯೇ ಹೊರತು, ಸಚಿವರ ಹಣದಿಂದ ನೀಡುತ್ತಿಲ್ಲ. ಪೊಲೀಸರನ್ನು ಪ್ರಶ್ನಿಸುವುದಿದ್ದರೆ ಕಚೇರಿಯಲ್ಲಿ ಕರೆದು ಮಾತಾಡಬೇಕು. ಅದನ್ನು ಬಿಟ್ಟು ಸಾರ್ವಜನಿಕ ಸ್ಥಳದಲ್ಲಿ ಅವರನ್ನು ನಿಂದಿಸಬಾರದು. ಹೀಗೆ ಮಾಡಿದರೆ ಪೊಲೀಸರು ಆತ್ಮವಿಶ್ವಾಸದಿಂದ ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X