Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು...

ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ: ಟಿ.ಎ.ನಾರಾಯಣಗೌಡ

"ಕನ್ನಡಿಗರ ಮೇಲೆ ಹಿಂದಿ ಹೇರಿಕೆಯ ಉದ್ದೇಶವಿದ್ದರೆ ಆರ್‌ಸಿಬಿ ಫ್ರಾಂಚೈಸಿ ಕರ್ನಾಟಕ ಬಿಟ್ಟು ತೊಲಗಲಿ"

ವಾರ್ತಾಭಾರತಿವಾರ್ತಾಭಾರತಿ29 Nov 2024 10:18 AM IST
share
Photo of  T A Narayana gowda

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ‌ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ಆರ್ ಸಿಬಿಯನ್ನು ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್ ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ‌. ಹೀಗಾಗಿಯೇ ಅದರ ಆದಾಯ ವರ್ಷವರ್ಷಕ್ಕೂ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ ಮೂರನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ. ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ. ತಂಡದಲ್ಲಿ ಇತರ ರಾಜ್ಯಗಳ ಆಟಗಾರರಿದ್ದಾರೆ ಎಂಬ ಕಾರಣಕ್ಕೆ, ಹೊರರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ ಎಂಬ ಕಾರಣಕ್ಕೆ ಹಿಂದಿಯಲ್ಲಿ ಪುಟ ತೆರೆದಿರುವುದಾದರೆ, ದೇಶದ ಎಲ್ಲ ಭಾಷೆಗಳಲ್ಲೂ ಪುಟ ತೆರೆಯಬೇಕಿತ್ತು. ಹಿಂದಿಯಲ್ಲಿ ಮಾತ್ರ ಯಾಕೆ ತೆರೆದರು?

ಆರ್ ಸಿಬಿ ಫ್ರಾಂಚೈಸಿ ನಡೆಸುತ್ತಿರುವವರಿಗೆ ಹಿಂದಿಯೇ ಅತಿಪ್ರಿಯವಾಗಿದ್ದರೆ ಹಿಂದಿ ರಾಜ್ಯಗಳಿಗೆ ವಲಸೆ ಹೋಗಲಿ, ಬೆಂಗಳೂರು ಎಂಬ ಹೆಸರನ್ನು ಕೈಬಿಡಲಿ. ಕನ್ನಡಿಗರ ಆದರ, ಆತಿಥ್ಯ, ಅಭಿಮಾನವನ್ನು ಗಳಿಸಿ ಕನ್ನಡಿಗರ ಬೆನ್ನಿಗೆ ಚೂರಿ ಇರಿಯುವ ಕೆಲಸವನ್ನೇಕೆ ಮಾಡುತ್ತಿದ್ದಾರೆ? ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ ಐದಾರು ಕನ್ನಡಿಗರನ್ನು ಖರೀದಿಸುವ ನಿರೀಕ್ಷೆ ಅಭಿಮಾನಿಗಳಿಗಿತ್ತು. ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಖರೀದಿಸಿ ನಾಯಕನನ್ನಾಗಿಸುವ ಅವಕಾಶವೂ ಆರ್ ಸಿಬಿಗೆ ಇತ್ತು. ಆದರೆ ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಅವಕಾಶಗಳನ್ನು ಕೈಚೆಲ್ಲಲಾಯಿತು.

ಕರ್ನಾಟಕ ಪರವಾಗಿ ಆಡುತ್ತಿರುವ ಹಲವಾರು ಪ್ರತಿಭಾವಂತ ಆಟಗಾರರನ್ನು ಆರ್ ಸಿಬಿ ಮೊದಲಿನಿಂದಲೂ ನಿರ್ಲಕ್ಷಿಸುತ್ತ ಬಂದಿದೆ. ಈ ಬಾರಿಯೂ ಅದೇ ಆಗಿದೆ. ದೇವದತ್ತ ಪಡಿಕ್ಕಲ್, ಮನೋಜ್ ಬಾಂಡಗೆ ಹೊರತುಪಡಿಸಿ ಯಾವ ಕನ್ನಡಿಗರನ್ನೂ ಖರೀದಿಸುವ ಮನಸು ಮಾಡಲಿಲ್ಲ. 25 ಆಟಗಾರರ ಪೈಕಿ 22 ಆಟಗಾರರನ್ನು ಖರೀದಿ ಮಾಡಲಾಗಿದೆ. ಬಾಕಿ ಉಳಿದಿರುವ ಇನ್ನು ಮೂರು ಸ್ಥಾನಗಳಿಗಾದರೂ ಕನ್ನಡಿಗ ಆಟಗಾರರನ್ನೇ ಖರೀದಿಸಬೇಕು. ಸಾಮಾಜಿಕ ಜಾಲತಾಣಗಳಿಂದ ಈ ಕೂಡಲೇ ಹಿಂದಿ ಪುಟಗಳನ್ನು ಅಳಿಸಿಹಾಕಬೇಕು. ಇಲ್ಲವಾದಲ್ಲಿ ಪರಿಣಾಮ ನೆಟ್ಟಗಿರುವುದಿಲ್ಲ. ಕನ್ನಡಿಗರ ಪ್ರೀತಿ, ಅಭಿಮಾನಗಳಿಂದ ಆರ್ ಸಿಬಿ ಬೆಳೆದಿದೆ. ಆದರೆ ಅದು ಮಾಡಿರುವ ವಿಶ್ವಾಸಘಾತಕತನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅದು ತನ್ನ ತಪ್ಪುಗಳನ್ನು ಈ ಕೂಡಲೇ ತಿದ್ದಿಕೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ಸ್ವರೂಪದ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಎಚ್ಚರಿಸುತ್ತಿದ್ದೇನೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X