ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ: ಕೃಷ್ಣಭೈರೇಗೌಡ

ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಹೈಕಮಾಂಡ್ ಸೂಚಿಸಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಶನಿವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷಗಳ ಬಳಿಕ ಪುನರ್ ರಚನೆ ಆಗುತ್ತೆ. ಸರಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಸಚಿವ ಸಂಪುಟದಿಂದ ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರ ಆಗಿದೆ. ಸಂಪುಟಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು ಎಂದರು.
ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದ್ದು, ಅವಕಾಶದ ವಿಚಾರದಲ್ಲಿ ನನಗೆ ಸಂತೃಪ್ತಿ ಇದೆ ಎಂದು ಹೇಳಿದರು.
Next Story





