Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ |...

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ ಪತ್ರ: ಸಚಿವ ಡಾ. ಎಂ.ಸಿ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ7 Nov 2023 12:15 PM IST
share
1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ ಪತ್ರ: ಸಚಿವ ಡಾ. ಎಂ.ಸಿ. ಸುಧಾಕರ್

ಬೆಂಗಳೂರು: 2021ನೇ ಸಾಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಡಿಸೆಂಬರ್ ಅಂತ್ಯದೊಳಗೆ ಆದೇಶ ಪತ್ರ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಇಂದು ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಬಳಗವು ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಇದ್ದಂತಹ ಎಲ್ಲಾ ಅಡೆತಡೆಗಳನ್ನು ಕಾನೂನು ರಿತ್ಯ ಬಗೆಹರಿಸಿ ಅಂತಿಮ ಆಯ್ಕೆ ಪಟ್ಟಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ನೇಮಕಾತಿ ಈ ಹಂತಕ್ಕೆ ತಲುಪಲು ಮುಖ್ಯಮಂತ್ರಿಗಳೆ ಕಾರಣ. ಅವರು ನನ್ನ ಮೇಲಿಟ್ಟ ಭರವಸೆಯಂತೆ ಕೆಲಸ ಮಾಡುತ್ತಿದ್ದೇನೆ. ತಮ್ಮೆಲ್ಲರ ಅಭಿನಂದನೆಗಳು ಅವರಿಗೆ ಸಲ್ಲಬೇಕೆಂದರು.

ನೇಮಕಾತಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಈಗಾಗಲೇ ಸಭೆಗಳನ್ನು ಮಾಡಿ, ವೇಳಾಪಟ್ಟಿಯನ್ನೂ ತಯಾರು ಮಾಡಿಕೊಳ್ಳಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ನೇಮಕಾತಿ ಆದೇಶ ಪ್ರತಿಯನ್ನು ಪಡೆದು ತಾವೆಲ್ಲರೂ ಇಲಾಖೆಗೆ ಬರುತ್ತೀರಿ ಎಂದು ಅಭ್ಯರ್ಥಿಗಳಿಗೆ ಭರವಸೆ ನೀಡಿದರು.

ಇಲಾಖೆಯ ಪ್ರತಿ ವಿಷಯದಲ್ಲಿಯೂ ಪಾರದರ್ಶಕವಾಗಿರಬೇಕು, ಯಾವುದೇ ರೀತಿಯ ಲೋಪಗಳು ಆಗದಂತೆ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿದ್ದೇನೆ. ಮುಂದೆಯೂ ಹೀಗೆ ಇರುತ್ತೇನೆ. ಇದು ನನ್ನ ಗುಣದಲ್ಲಿಯೆ ಇದೆ. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಸ್ಥಳದಲ್ಲಿ ನಿಯುಕ್ತಿ ಪಡೆದರೂ ಭವಿಷ್ಯದ ವಿದ್ಯಾರ್ಥಿಗಳನ್ನು ರೂಪಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿ ಎಂದು ಕಿವಿಮಾತುಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಬಳಗದ ನಾಗಲಕ್ಷ್ಮೀ, ಜಯಶಂಕರ್, ಅಶೋಕ್, ಉಮೇಶ್, ಮತ್ತಿತರಿದ್ದರು.

Tags

Minister Dr. M.C. Sudhakar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X