Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯುಜಿಸಿ ಆಧಾರದಲ್ಲಿ ವಿವಿಯಲ್ಲಿ ನೇಮಕ...

ಯುಜಿಸಿ ಆಧಾರದಲ್ಲಿ ವಿವಿಯಲ್ಲಿ ನೇಮಕ ಪ್ರಕ್ರಿಯೆ ನಡೆಸಬೇಕು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Aug 2023 11:31 PM IST
share
ಯುಜಿಸಿ ಆಧಾರದಲ್ಲಿ ವಿವಿಯಲ್ಲಿ ನೇಮಕ ಪ್ರಕ್ರಿಯೆ ನಡೆಸಬೇಕು: ಹೈಕೋರ್ಟ್

ಬೆಂಗಳೂರು, ಆ.27: ವಿಶ್ವ ವಿದ್ಯಾಲಯ ಧನ ಸಹಯೋಗ ಆಯೋಗ(ಯುಜಿಸಿ)ದ ನಿಯಮಗಳನ್ನು ಅಳವಡಿಸಿಕೊಂಡಿರುವ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಹುದ್ದೆಯನ್ನು ನೇಮಕ ಮಾಡುವ ಸಂದರ್ಭದಲ್ಲಿ ಉನ್ನತಾಧಿಕಾರ ಸಮಿತಿ ವಿಧಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಹೈಕೋರ್ಟ್ ಧಾರವಾಡ ಪೀಠ ಅಭಿಪ್ರಾಯಪಟ್ಟಿದೆ.

ತಮ್ಮನ್ನು ಆಯ್ಕೆ ಪಟ್ಟಿಯಲ್ಲಿ ಕೈಬಿಟ್ಟ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ಯಲಹಂಕ ನಿವಾಸಿ ಎಸ್.ಎ.ವೇಣು ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪುರಸ್ಕರಿಸಿ ಈ ಅಭಿಪ್ರಾಯಪಟ್ಟಿದೆ. ಜೊತೆಗೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಯುಜಿಸಿ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿರುವುದಾಗಿ 2013ರ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದೆ.

ಈ ನಿಟ್ಟಿನಲ್ಲಿ ನೇಮಕಾತಿ ಹಾಗೂ ಬಡ್ತಿ ನೀಡುವ ಪ್ರಕ್ರಿಯೆಯನ್ನೂ ಮಾರ್ಗಸೂಚಿಗಳ ಅನುಸಾರವಾಗಿಯೇ ನಡೆಸಬೇಕು ಎಂದು ತಿಳಿಸಿದೆ. ಅಲ್ಲದೆ, ಯುಜಿಸಿ ಮಾರ್ಗಸೂಚಿಗಳ ಪ್ರಕಾರ ಸ್ಕೋರ್ ಕಾರ್ಡ್ ಆಧಾರದಲ್ಲಿ ನೇಮಕ ಮಾಡಬೇಕು ಎಂದು ತಿಳಿಸಿದೆ.

ಆದರೆ, ಪ್ರಸ್ತುತ ಪ್ರಕರಣದಲ್ಲಿ ಅಂಕಗಳನ್ನು ಪರಿಗಣಿಸಿರುವ ಅಂಶ ಗೊತ್ತಾಗಿದೆ. ಇದು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ. ಜೊತೆಗೆ, ಅರ್ಜಿದಾರರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಯಮಗಳ ಅನುಸಾರವಾಗಿ ಸಲ್ಲಿಕೆ ಮಾಡಿದ್ದಾರೆ. ಯಾವುದೇ ನಿಯಮಗಳನ್ನು ಮೀರಿಲ್ಲ ಎಂದು ಪೀಠ ತಿಳಿಸಿದೆ.

ಪ್ರಸ್ತುತ ಪ್ರಕರಣದಲ್ಲಿ ನೇಮಕಾತಿ ಪ್ರಕ್ರಿಯೆ ಕಾನೂನಿಗೆ ವ್ಯತಿರಿಕ್ತವಾಗಿದ್ದಲ್ಲಿ ಮಧ್ಯಪ್ರವೇಶ ಮಾಡಿ ನ್ಯಾಯಾಂಗ ಪರಿಶೀಲನೆ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು, ಮುಂದಿನ ಎಂಟು ವಾರಗಳಲ್ಲಿ ಮತ್ತೆ ನೇಮಕ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿದೆ.

ಪ್ರಕರಣವೇನು?: ದಾರವಾಡ ಕೃಷಿ ವಿಶ್ವವಿದ್ಯಾಯದಲ್ಲಿ ಖಾಲಿ ಇದ್ದ ಆಹಾರ ಎಂಜಿನಿಯರ್ ಹುದ್ದೆಗೆ ಅಂಕಗಳನ್ನು ಆಧರಿಸಿ ಡಿ.ನಾಗರಾಜು 85.4 ಅಂಕಗಳನ್ನು ಪಡೆದಿದ್ದು, ಅವರನ್ನು ನೇಮಕ ಮಾಡಿ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದನ್ನು ಪ್ರಶ್ನಿಸಿದ್ದ ಅರ್ಜಿದಾರ ವೇಣು, ತನಗೆ ಆರು ವರ್ಷ ಬೋಧನಾ ಅನುಭವ ಇದ್ದು, ಇದಕ್ಕೆ ಆರು ಅಂಕಗಳು ಲಭ್ಯವಾಗಲಿದೆ. ಜೊತೆಗೆ, ಪಿಹೆಚ್‍ಡಿ ಪದವಿಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದು, ಇದಕ್ಕೆ ಮೂರು ಅಂಕಗಳು ಹೆಚ್ಚಳವಾಗಲಿದೆ. ಒಟ್ಟು ಸೇರಿದಲ್ಲಿ 86.6 ಅಂಕಗಳಾಗಲಿದ್ದು, ಆಯ್ಕೆಯಾಗಿರುವ ನಾಗರಾಜು ಎಂಬುವರಿಗಿಂತಲೂ ಹೆಚ್ಚು ಅಂಕಗಳು ಪಡೆದುಕೊಂಡಂತಾಗಲಿದೆ. ಸ್ಕೋರ್ ಕಾರ್ಡ್ ಪದ್ಧತಿಯನ್ನು ಅನುಸರಿಸಿದಲ್ಲಿ ಆಯ್ಕೆಯಾಗಿರುವವರಿಗಿಂತ ಹೆಚ್ಚು ಅಂಕಗಳಾಗಲಿದೆ. ಆದರೆ, ವಿಶ್ವವಿದ್ಯಾಲಯ ಯುಜಿಸಿ ನಿಯಮಗಳನ್ನು ಉಲ್ಲಂಘಿಸಿ ಅಂಕಗಳನ್ನು ಪರಿಗಣಿಸಿದೆ. ಇದರಿಂದ ತಮಗೆ ಅನ್ಯಾಯವಾಗಿದೆ ಎಂದು ಅರ್ಜಿಯಲ್ಲಿ ಕೋರಿದ್ದರು.

ನಾಗರಾಜು ಅವರ ನೇಮಕವನ್ನು ಸಮರ್ಥಿಸಿಕೊಂಡಿದ್ದ ವಿಶ್ವವಿದ್ಯಾಲಯ, ಇದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳ ನೇಮಕ ಪ್ರಕ್ರಿಯೆಯಾಗಿದೆ. ಇತರೆ ನೇಮಕ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಲಾಗುತ್ತಿದೆ ಎಂದು ವಿವರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X